Thursday, 2 September 2021

ಕಂಡು ಎಂದಿಗೆ ಧನ್ಯಳಾಗುವೆ ನಾನು ಪಂಡರೀಶನ ankita gopalakrishna vittala KANDU ENDIGE DHANYALAAGUVE NAANU PANDAREESHANA

ರಾಗ ಬಹುದಾರಿ    ಆದಿತಾಳ



ಹರಿದಾಸಿನಿ ಅಂಬಾಬಾಯಿಯವರ ಕೃತಿ 


ಕಂಡು ಎಂದಿಗೆ ಧನ್ಯಳಾಗುವೆ ನಾನು
ಪಂಡರೀಶನ ಪಾದ ಪುಂಡರೀಕವನೂ॥ಪ॥

ಪುಂಡರೀಕನಿಗೊಲಿದು ಒಂದು ಇಟ್ಟಿಗೆ ಮೇಲೆ
ಪಾಂಡವರ ಪ್ರಿಯ ಬಂಧು ನೆಲೆಸಿದಂಥಾ
ಪಂಡರೀ ಕ್ಷೇತ್ರದಲಿ ಚಂದ್ರಭಾಗದಿ ಮಿಂದು
ಮಂಡೆ ಬಾಗುತ ಹರಿಗೆ ಹಿಂಡಘವ ಕಳೆದು॥೧॥

ಕೋಮಲದ ಚರಣಕಭಿನಮಿಸಿ ಕರಯುಗದಿಂದ
ಶ್ಯಾಮವರ್ಣನ ಪಾದಕಮಲ ಮುಟ್ಟೆ
ಆ ಮಹಾ ಆನಂದ ಅನುಭವಿಪ ಭಾಗ್ಯವನು
ಶ್ರೀ ಮಹಾಲಕುಮಿಪತಿ ಎಂದು ಕಾಂಬುವೆನೋ॥೨॥

ಆಪಾರಭಕ್ತರಿಗೆ ವಲಿದ ವಿಠಲನ ಮೂರ್ತಿ
ಆಪಾದ ಮೌಳಿ ಈಕ್ಷಿಸುತ ಹೃದಯದಲಿ
ಇರ್ಪಮೂರ್ತಿಯ ತಂದು ಗುರುಬಿಂಬ ಸಹಿತದಲಿ
 ಗೋಪಾಲಕೃಷ್ಣವಿಠಲನ ಎಂದು ಕಾಂಬೆ॥೩॥
***

ಕಂಡು ಎಂದಿಗೆ ಧನ್ಯಳಾಗುವೆ ನಾನು
ಪಂಡರೀಶನ ಪಾದ ಪುಂಡರೀಕವನೂ||pa||
.
ಪುಂಡರೀಕನಿಗೊಲಿದು ಒಂದು ಇಟ್ಟಿಗೆ ಮೇಲೆ
ಪಾಂಡವರ ಪ್ರಿಯ ಬಂಧು ನೆಲಸಿದಂಥಾ
ಪಂಡರೀ ಕ್ಷೇತ್ರದಲಿ ಚಂದ್ರಭಾಗದಿ ಮಿಂದು
ಮಂಡೆ ಬಾಗುತ ಹರಿಗೆ ಹಿಂಡಘವ ಕಳೆದೂ ||1||

ಕೋಮಲದ ಚರಣಕಭಿನಮಿಸಿ ಕರಯುಗದಿಂದ
ಶ್ಯಾಮವರ್ಣನ ಪಾದಕಮಲ ಮುಟ್ಟೆ
ಆ ಮಹಾ ಆನಂದ ಅನುಭವಿಪ ಭಾಗ್ಯವನು
ಶ್ರೀ ಮಹಾಲಕುಮಿಪತಿ ಎಂದು ಕಾಂಬುವೆನೋ ||2||

ಆಪಾರಭಕ್ತರಿಗೆ ವಲಿದ ವಿಠಲನ ಮೂರ್ತಿ
ಆಪಾದ ಮೌಳಿ ಈಕ್ಷಿಸುತ ಹೃದಯದಲಿ
ಇರ್ಪಮೂರ್ತಿಯ ತಂದು ಗುರುಬಿಂಬ ಸಹಿತದಲಿ
ಗೋಪಾಲಕೃಷ್ಣವಿಠಲನ ಎಂದು ಕಾಂಬೆ ||3||
****


No comments:

Post a Comment