Thursday 17 October 2019

ಆವಾವ ಬಗೆಯಿಂದ ಹರಿಗರ್ಪಿಸೊ ankita vijaya vittala

ವಿಜಯದಾಸ
ಆವಾವ ಬಗೆಯಿಂದ ಹರಿಗರ್ಪಿಸೊ
ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ಪ

ನೋಡುವ ನೋಟಗಳು ಹರಿಯೆ ನೋಡಿದನೆನ್ನಿ
ಆಡುವ ಮಾತುಗಳು ಹರಿಯೆ ಆಡಿದನೆನ್ನಿ 1

ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ
ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ
ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ
ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ 2

ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ
ಹೇಳುವ ವಿಧವನಿತು ಹರಿಯೆ ಎನ್ನಿ
ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ
ಮೇಲು ಸುಖ ಬಡುವುದು ಹರಿಯೆ ಎನ್ನಿ3

ಕೊಂಡ ಎನ್ನಿ
ಭೂಷಣವಿಡುವುದು ಹರಿಯೆ ಎನ್ನಿ
ಲೇಸು ಬಯಸುವುದು ಹರಿಯೆ ಬಯಿಪನೆನ್ನಿ
ಗ್ರಾಸ ಮೆಲುವದೆಲ್ಲ ಹರಿಯೆ ಎನ್ನಿ 4

ಸತಿಯ ಕೂಡುವದೆಲ್ಲ ಹರಿಯೆ ಕೂಡಿದನೆನ್ನಿ
ಹಿತವಾಗಿಪ್ಪದು ಹರಿಯೆ ಎನ್ನಿ
ಸುತರ ಪಡೆದಾದಲ್ಲಿ ಹರಿಯೆ ಪಡೆದನೆನ್ನಿ
ಪ್ರತಿಕೂಲವಾಗುವುದೆ ಹರಿಯೆ ಎನ್ನಿ 5

ಬಳಗ ಸಾಕುವುದೆಲ್ಲ ಹರಿಯೆ ಸಾಕಿದನೆನ್ನಿ
ಸುಲಭನಾದರೆ ಹರಿಯಾದನೆನ್ನಿ
ಗಲಭೆ ಮಾಡುವುದೆಲ್ಲ ಹರಿಯೆ ಮಾಡಿದನೆನ್ನಿ
ಸುಳಿದಾಡುವುದೆಲ್ಲ ಹರಿಯೆ ಎನ್ನಿ 6

ಏನೆಂಬೆ ಹರಿ ಲೀಲೆ ನಿರ್ದೋಷ ನಿಸ್ಸಂಗ
ಅನಂತಕಾಲಕ್ಕೂ ಎಲ್ಲಿದ್ದರು
ಕಾಯ ವಿಜಯವಿಠ್ಠಲರೇಯ
ನಾನಾ ವ್ಯಾಪಾರಗಳ ಮಾಳ್ಪನೆನ್ನಿ 7
********

No comments:

Post a Comment