Wednesday 16 October 2019

ಕೇಳು ಮನವೆ ಸುಜನನಾಗಿ ಬಾಳು ಬಾಲ ಭಕುತಿ ankita vijaya vittala

ಕೇಳು ಮನವೆ ಸುಜನನಾಗಿ ಬಾಳು ಬಾಲ ಭಕುತಿಯಲ್ಲಿ
ಕೇಳು ಶ್ರವಣದಲ್ಲಿ ಪೇಳು ಹರಿಯೇ ದೈವವೆಂದು ಪ

ನಿಲ್ಲಿಸು ಹರಿಯ ವೊಲಿಸುವಳಿಗೆ ಗಳಿಸುಜ್ಞಾನ
ವಳಿಸು ಪಾಪಕಲಿಯಾ ಬೆಳಿಸು ಘಳಿಸು
ತಾಮಸ ಸುಳಿಸು ಮಾರ್ಗ
ಬೆಳಿಸು ಚೆನ್ನಾಗಿ ಗೆಲಿಸು ವ್ರತವ
ಚಲಿಸು ಯಾತ್ರೆಯ ಇಳಿಸು ಮಮತೆ
ಕಲಿಸು ಮಿಥ್ಯವ ಥಳಿಸುವಂತೆ ಕೇಳು ಮನವೆ 1

ಕೀರ್ತನೆ ಕಾಡು ರಂಗನ
ಬೇಡು ದೈನದಿ ನೀಡು ಹಸ್ತವ
ಬಾಡು ನಿನ್ನೊಳಗಾಡು
ತಾಡುತಾ ಕೇಡು ಒದೆದು ಬಿಡು ನೆಚ್ಚ
ದೀಡ್ಯಾಡ್ಯೋ ಕಾಯವ ಗೂಢದ ಮಾತಾಡು ಕಲಾಪ
ಬೇಡರಟ್ಟಲು ಮೋಡು ನಿಲ್ಲದೆ ಪಾಡು ಪಂಥವಾ 2

ನೆರಿಯೊ ವೊಡನೆ ಸುರಿಯೊ ನಾಮವ
ಅರಿಯೊ ಮಹಿಮೆ ಮರಿಯೊ ವ್ಯಾಕುಲ
ಮೆರಿಯೊ ಗುಪ್ತದಿ ಜರಿಯೊ ಹೀನರಾ ಸರಿಯೊ ಮಿರಲು
ಗುರಿಯೊ ತಮಕ್ಕೆ ಸರಿಯೆ ಲಾಲಿಸು ಧರಿಯೊಳಗೆ ನೀ
ವಿಜಯವಿಠ್ಠಲನೆಂದು 3
************

No comments:

Post a Comment