Thursday, 17 October 2019

ಧ್ಯಾನವನು ಮಾಡು ಬಿಂಬ ಮೂರುತಿಯ ankita vijaya vittala

ಧ್ಯಾನವನು ಮಾಡು ಬಿಂಬ ಮೂರುತಿಯ ಪ

ಆನಂದದಲಿ ಕುಳಿತು ಅಂತರಂಗದಲಿ ಅ.ಪ

ಸದಾಚಾರನಾಗಿ ದ್ವಾದಶಗುರುಗಳಿಗೆರಗಿ
ಮುದದಿಂದ ಮೂಲಮಂತ್ರವನು ಜಪಿಸಿ
ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು
ಪದಮಾಸನವ ಹಾಕಿ ಪರಮ ವಿಶ್ವಾಸದಲಿ1

ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ
ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು
ಮಂಗಳ ಶೋಭಿತ ಅಖಂಡ ಧ್ಯಾನದಂತ
ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2

ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ
ಮಗುಳೆ ಪರಮ ಗುರುವಿನ ಮೂರ್ತಿಗೆ
ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ
ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3

ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ
ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ
ಭರದಿಂದ ಎಲ್ಲವನು ತಂದು ಹೃದಯದಲ್ಲಿ
ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4

ಆತನೆ ಬಿಂಬ ಮೂರುತಿಯೆಂದು ತಿಳಿದುಕೊ
ಆ ತರುವಾಯ ನಾಡಿಗಳ ಗ್ರಹಿಸಿ
ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ
ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5

e್ಞÁನ ಪ್ರಕಾಶದಲಿ ಇದ್ದು ನಿನ್ನ ಹೃದಯ
ಕಮಲ ಮಧ್ಯ
ಮೂರ್ತಿ ನಿಲ್ಲಿಸಿ ಬಾಹ್ಯದಲಿ
ಏನೇನು ಪೂಜೆಯನು ಉಳ್ಳದನು ಮಾಡೊ6

ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು
ಕ್ಷಣ ಕ್ಷಣಕೆ ಹರಿಪಾದವನು ನೋಡುತ
ಅಣುರೇಣು ಚೇತನಾಚೇತನಕೆ ನೇಮಕ
ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7

ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ
ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ
ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ
ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8

ಪರಿ ಧೇನಿಸಲು ದೇವ ಕರುಣನ ಮಾಡೆ
ಪಾಪ ಸಂಚಿತವು ಪ್ರಾರಬ್ಧ ನಾಶ
ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು
ಗೋಪಾಲ ವಿಜಯವಿಠ್ಠಲನೊಲಿವನಾಗ9
**********

No comments:

Post a Comment