ತಂಗಿ ಕೇಳೆ ಅತಿಕೌತುಕ ಒಂದು ಸುದ್ಧಿಯ
ಸಿಂಗನ ಮೋರೆ ಮಗುವು ಪುಟ್ಟಿ ಮಾಡಿದಾ ಚರ್ಯ||pa||
ತಂದೆ ತಾಯಿಗಳಿಲ್ಲಾದ್ಹಾಂಗೆ ಕಂದ ಪುಟ್ಟಿತು
ಬಂಧು ಎತ್ತು ಕೊಂಬೇನೆಂದರೆ ಗುಡು ಗುಡುಗುಟ್ಟಿತೂ
ಅಂದ ಛಂದವ ನೋಡೇನೆಂದರೆ ಘೊರಾಕೃತಿಯಾಯ್ತು
ತಂದ ತೊಟ್ಟಿಲೊಳಿಟ್ಟೀನೆಂದರೆ ಹೊಸಲೊಳ್ ಕೂತೀತು ||1||
ತೊಡೆಯಲ್ಲಿಟ್ಟು ತಟ್ಟೀನೆಂದರೆ ಕಿಡಿ ಕಿಡಿ ಉಗುಳೀತು
ಕಡುಪಾಪಿ ರಕ್ಕಸನ ತನ್ನ ತೊಡೆಯಲ್ಲಿಟ್ಟಿತೂ
ಕಡು ಕೋಪದಿಂದಾಲಿ ಅವನ ಒಡಲ ಬಗೆದಿತು.
ಎಡಬಲಕೊಬ್ಬರು ಬರದಂತೆ ಆರ್ಭಟಿಸುತಲಿದ್ದಿತು ||2||
ಹಾಲನೆರೆದೆನೆಂದರೆ ರುಧಿರ ಪಾನವ ಮಾಡಿತು
ಮಾಲೆ ಹಾಕಿ ಮುದ್ದಿಪನೆನೆ ಕರುಳ್ಮಾಲೆ ಹಾಕೀತು
ಮೇಲೆ ಕೇಶ ಕಟ್ಟೀನೆಂದರೆ ಕೆದರಿಕೊಂಡೀತೂ
ಬಾಲಲೀಲೆ ನೋಡೇನೆಂದರೆ ಜಗವ ಬೆದರಿಸಿತು ||3||
ಸುರಹರ ಬ್ರಹ್ಮಾದಿಗಳು ಬಂದರು ತಿರುಗದೆ ಕೂತೀತು
ಸಿರಿಕಂಡೂ ಬೆರಗಾಗೆ ಮನವು ಕರಗದೆ ಕಲ್ಲಾಯ್ತು
ತರಳನೊಬ್ಬನ ಕೂಡೆ ತಾನೂ ಆಟವನಾಡಿತು
ಉರಿಮುಖ ಹುಬ್ಬೂ ಗಂಟೂ ಬಿಟ್ಟು ಕಿರುನಗೆ ನಕ್ಕೀತು ||4||
ಶ್ರೀಪತಿ ಎಂದು ತರಳನು ಪೊಗಳೇ ಸಿರಿಯ ಬೆರತೀತು
ಆಪತ್ತನು ಪರಿಹರಿಪ ಲಕ್ಷ್ಮೀನರಹರಿ ಎನಿಸೀತು
ದ್ವಾಪರದಲ್ಲಿ ಮತ್ತೆ ಪುಟ್ಟಿ ಮುದುವ ಬೇಡೀತು
ಗೋಪಾಲಕೃಷ್ಣವಿಠ್ಠಲನೆನಿಸಿ ಗೋಪಿಯ ಮಗುವಾಯ್ತು ||5||
***

ಅಂಬಾಬಾಯಿಯವರ ರಚನೆ
ReplyDelete