Friday, 27 December 2019

ಏನು ಚೋದ್ಯ ಶ್ರೀನಿಧೆ ಹರಿಮಾನಿನಿ ಶ್ರೀದೇವಿ ankita kamalanabha vittala

by ನಿಡಗುರುಕಿ ಜೀವೂಬಾಯಿ
ಏನು ಚೋದ್ಯ ಶ್ರೀನಿಧೆ ಹರಿಮಾನಿನಿ ಶ್ರೀದೇವಿ ಭೂದೇವಿರಮಣ ಪ

ಸೃಷ್ಟಿಕರ್ತನೆಂದು ಪೇಳ್ವರು ಪಾಂಡವರ ಮನೆಯಬಿಟ್ಟಿ ಬಂಡಿಬೋವನೆಂಬೋರು ಪಾಂಚಾಲಿಗೆ ಒದಗಿದಕಷ್ಟಕಳೆದÀು ಪೊರೆದನೆಂಬೊರೊಕೆಟ್ಟದಾನವರ ಅಟ್ಟುಳಿಯ ಕಳೆದುದುಷ್ಟಕಂಸನವಧೆಯ ಸ್ಪಷ್ಟ ಪೇಳುತಿಹರೊ 1

ಗಜನ ಸಲಹಿ ಪೊರೆದನೆಂಬೊರೊ ನೆಗಳೆಯನು ಸೀಳಿತ್ರಿಜಗದೊಡೆಯ ಶ್ರೀಶನೆಂಬೊರೊ ಪ್ರಹ್ಲಾದ ಧೃವಗೆನಿಜಸೌಭಾಗ್ಯ ಇತ್ತೆ ಎಂಬೊರೊವಿಜಯಸಾರಥಿಯ ವಿಶ್ವರೂಪ ತೋರಿಸುಜನರನ್ನು ಪೊರೆದ ನಿಜವ ಪೇಳುತಿಹರು 2

ವತ್ಸಾಸುರನ ಮಡುಹಿದೆಂಬೊರೊ ಅಡವಿಯಲಿ ಕಾಡ-ಕಿಚ್ಚನುಂಗಿ ಬೆಳೆದಿ ಎಂಬೊರೊ ತಾಯಿಗೆ ಬಾಯೋಳಹೆಚ್ಚಿನ್ವಿಷಯ ತೋರ್ದಿ ಎಂಬೊರೊಕಚ್ಚ ಬಂದ ಘಣಿಯ ಮೆಟ್ಟಿ ತುಳಿದು ಜಲವಸ್ವಚ್ಛಗೈದನೆಂದಾಶ್ಚರ್ಯ ಪೇಳುತಿಹರೊ 3

ಕರಡಿ ಮಗಳು ಮಡದಿಯೆಂಬೊರೊ ಪುಷ್ಪವನು ತರಲುತೆರಳಿ ಯುದ್ಧ ಮಾಡ್ದನೆಂಬೊರೊ ದೇವೇಂದ್ರನ ಗೆಲಲುತರುಣಿ ಸಮರಗೈದಳೆಂಬೊರೊಮುರಳಿನಾದದಿಂದ ತರುಣಿಯರ ಮನವಮರುಳುಗೈದನೆಂದು ಪರಿಪರಿ ಪೇಳುವರೊ 4

ಕೆಟ್ಟದ್ವಿಜನ ಪೊರೆದಿ ಎಂಬೊರೋ ವನವನವ ಚರಿಸಿಸುಟ್ಟ ದಾಸಗೊಲಿದೆ ಎಂಬೊರೋ ಒಪ್ಪಿಡಿಯ ಗ್ರಾಸವಕೊಟ್ಟದ್ವಿಜನ ಪೊರೆದಿಯೆಂಬೊರೊಅಟ್ಟಹಾಸದಿ ತಂದ ರುಕ್ಮಿಣಿಯ ತನ್ನಪಟ್ಟದರಸಿಯೆಂದು ಸ್ಪಷ್ಟ ಪೇಳುತಿಹರೊ 5

ಶಿಲೆಯ ಸತಿಯಗೈದನೆಂಬರೊ ಅಡವಿಗಳ ಚರಿಸಿಬಲುಕಪಿಗಳ ಕೂಡ್ದನೆಂಬೊರೊ ಭಯ ಭಕ್ತಿಗೆ ಮೆಚ್ಚಿಫಲದ ಎಂಜಲ ಸವಿದನೆಂಬೊರೊ ಮೆಚ್ಚಿಸುಲಭದಿಂದ ದೈತ್ಯಕುಲವನೆಲ್ಲ ಸವರಿಛಲದ ದಶಶಿರನ ವಧೆಯ ಪೇಳುತಿಹರೊ 6

ಪುಟ್ಟಬ್ರಹ್ಮಚಾರಿ ಎಂಬೋರೊ ಬಲಿರಾಜನ ಬೇಡಿಕೊಟ್ಟದಾನ ಕೊಂಡನೆಂಬೋರೊ ಈರಡಿಯನಳೆದುಮೆಟ್ಟಿ ಸಿರವ ತುಳಿದನೆಂಬೋರೊಎಷ್ಟು ಪೇಳಲಿ ನಿನ್ನ ಶ್ರೇಷ್ಠಗುಣಗಳನ್ನುದಿಟ್ಟ ಕಮಲನಾಭ ವಿಠ್ಠಲ ಸರ್ವೇಶ 7
*******

No comments:

Post a Comment