by ನಿಡಗುರುಕಿ ಜೀವೂಬಾಯಿ
ಬಾರಮ್ಮ ಮನೆಗೆ ಸೌಭಾಗ್ಯದ ಮಹಲಕ್ಷ್ಮಿ ಪ
ಬಾರಮ್ಮ ಮನೆಗೆ ಭಕ್ತರು ನಿನ್ನ ಸ್ತುತಿಪರುಮಾರನಯ್ಯನ ಕೂಡಿ ಮನ ಹರುಷದಿ ಬೇಗ ಅ.ಪ
ಶಂಖು ಚಕ್ರ ಗದ ಪದ್ಮವು ಧರಿಸಿದಪಂಕಜಾಕ್ಷನಸಿರಿಪಟ್ಟದರಸಿದೇವಿಕುಂಕುಮಾಂಕಿತೆ ಸರ್ವಾಲಂಕಾರ ಶೋಭಿತೆಬಿಂಕಮಾಡದಲೆ ಬಾ ವೆಂಕಟನರಸಿಯೆ1
ಶುಕ್ರವಾರದಿ ನಿನ್ನ ಭಕ್ತಿಲಿ ಸ್ತುತಿಪರಇಷ್ಟ್ಯಾರ್ಥಗಳ ಕೊಟ್ಟುದ್ಧರಿಪಭಾರ್ಗವಿತಾಯೆಭಕ್ತವತ್ಸಲನೊಡಗೂಡುತ ಬಾರಮ್ಮಮಿತ್ರೇರು ಕರೆವರು ಕೃಷ್ಣವೇಣಿಯೆ ನಿನ್ನ 2
ಕನ್ನಡಿ ಕದುಪಿನ ಕಡು ಮುದ್ದು ಮಹಾಲಕ್ಷ್ಮಿರನ್ನ ಪವಳ ಹಾರಾಲಂಕೃತ ಶೋಭಿತೆಸ್ವರ್ಣಮಂಟಪದಿ ಕುಳ್ಳಿರು ಬಾರೆಂದೆನುತಲಿಕರ್ನೇರು ಕರೆವರು ಕಮಲಾಕ್ಷನೊಡಗೂಡಿ 3
ನಿಗಮವೇದ್ಯಳೆ ನಿನ್ನಅಗಣಿತಗುಣಗಳಪೊಗಳುವ ಸುಜನರಅಘಪರಿಹರಿಸುತ್ತಬಗೆ ಬಗೆ ನಾಮಗಳಿಂದ ಪೂಜೆಯಗೊಂಬಖಗವಾಹನನ ರಾಣಿ ಲಗುಬಗೆಯಿಂದಲಿ 4
ತಡಮಾಡದಲೆ ಬಾ ಬಾ ಮುಡಿದ ಹೂವು ಉದರುತ್ತಬಡನಡು ಬಳುಕುತ್ತ ಕೊಡುತ ವರಗಳನ್ನುಬಿಡಿಮಲ್ಲಿಗೆಯ ತಂದು ನಡೆಮುಡಿ ಹಾಸುವರುಕಡಲೊಡೆಯನ ರಾಣಿ ಸಡಗರದಿಂದೊಮ್ಮೆ 5
ಕ್ಷೀರವಾರಿಧಿಯ ಕುಮಾರಿಯೆ ಬಾರೆಂದುಸಾರಸಮುಖಿಯರು ಸರಸದಿ ಕರೆವರುಮೂರ್ಲೋಕ ವಿಖ್ಯಾತೆ ಮಾರಮಣನ ಪ್ರೀತೆಚಾರುಮಂಗಳೆ ಸತ್ಯ ಶ್ರೀ ಭೂದುರ್ಗಾಂಬ್ರಣೆ 6
ಕಮಲಾಕ್ಷಿ ಕೇಳಮ್ಮ ಶ್ರಮ ಪರಿಹರಿಸೆಂದುನಮಿಸಿ ಬೇಡುವೆ ನಿನ್ನಭ್ರಮರಕುಂತಳೆ ತಾಯೆಕಮಲನಾಭ ವಿಠ್ಠಲನ ಕೂಡಿ ಹರುಷದಿಸುಮನಸರೊಡೆಯನಸತಿಸಾರ್ವಭೌಮಳೆ7
********
No comments:
Post a Comment