Thursday, 14 November 2019

ಭಾರತೀ ರಮಣ ನಂಬಿದೆ ಪಾದವಾರಿಜಾ ankita pranesha vittala

by ಪ್ರಾಣೇಶದಾಸರು
ಭಾರತೀರಮಣ ನಂಬಿದೆ ಪಾದವಾರಿಜಾಕರುಣಾ ವಾರಿಧೆ ಯನ್ನನು |ದೂರ ನೋಡದೆ ನಿನ್ನ ಸಾರೆಗರೆದುಭಯ ನಿವಾರಿಸಿ ಸಲಹೋ ಪ

ನೀಲಲೋಹಿತನ ಪಿತನೇ ಗೋಪಾಲನ ಸುತಾ |ಕಾಳಕೂಟ ಪಾನಿ ವಿಶಾಲಾಂಬಕಾ ಮಾರರಿಂದ ||ವೇಳೆ ವೇಳೆಗಳಲ್ಲಿ ವೋಲಗವ ಕೈಕೊಂಬುವ |ಕಾಳೀವಲ್ಲಭಭೇಶಭಾಸ್ಕರರೋಲು ಸನ್ನಿಭ ||ಈ ಲೌಕಿಕ ನರರಾಲಯ ಕಾಯಿಸದೆ |ವಾಲಯ ಸುಮತಿಯ ಪಾಲಿಪುದೊಲಿದು 1

ಜಾನಕೀಪತಿ ಸೇವೆ ಮಾಡಿದೈ ಕಾಣೆನೋಪ್ರತಿ|ಯಾ ನಿನಗಾರಾರಾ ಭುವನದೊಳಗೆ ಗಂಧವಹನೆ ||ಮುದ್ರಿಯ ಕೊಂಡು ಕ್ಷಣದೊಳಗೆ ಜಲಧಿಯನ್ನೆ ಹಾರಿದೆ |ಸೀತೆಗುಂಗುರವನ್ನೆ ತೋರಿದೆ ||ಆ ನಗರವನು ದಹನಗೈಸಿ ಬಹು |ದಾನವರನಳಿದು ದಶಾನನನೊದ್ದೆ 2

ಪಾಪದೂರನೆ ವೃಕೋದರ ಶ್ರೀ ದ್ರೌಪದೀಶನೇ |ವಿಪಿನಚರಿಸಿ ಕುರುಪತಿಯ ತರಿದು ||ಕ್ಷಿತಿಪರನ್ನು ಬಿಡಿಸಿದೆಯೈ ಪಾಂಡವರ (ಪರಿ) ಪಾಲಕ |ಕೋಪನಾಶನ ಉದ್ಧರಿಸೆನ್ನ ಚಾಪಭಂಜನ ||ಶ್ರೀಪತಿ ದ್ವಯ ಪದ ಆಪಜ ಭಜಿಸುವ |ನೇ ಪರಮೇಷ್ಠಿಯರೂಪಗುಣಾಢ್ಯ 3

ದೇಶಿಕೋತ್ತಮ ಮಾರುತಿ ಇಂದಿರೇಶನ ಪ್ರೇಮ |ಸಂಪಾದಿಸಿಕೊಂಡತಿಶಯ ಭಕುತಿಯಿಂದಲೀ ಸಮೀಚೀನವಾಗಿ ||ತ್ರಿಂಶತಿ ಸಪ್ತ ಸಂಖ್ಯಾ ದರುಶನ ಗ್ರಂಥ ವಿರಚಿಸಿ ದು |ರ್ಭಾಷ್ಯವ ಸಂತರಾ ಸಲಹುವರನಾಭಾಸ ಮಾಡಿದೆ ||ವ್ಯಾಸಭಜಕ ನಿನ್ನ ದಾಸನೆನಿಸಿಕೊಳ್ಳೋ4

ಅಂಜನಾಸುತ ಪ್ರಾಣೇಶ ವಿಠಲನೆಂಜಲನೊಯ್ಯುತ |ಭುಂಜಿಸಿದಿಯಲೊನಿರಂಜನಕಪಿ ಪ್ರ- ||ಭಂಜನಕೊಡು ಕೃತಾಂಜಲಿಯಿಂ ಬೇಡುವೆ |ಕಂಜನಾಭನ ಸ್ಮರಣೆ ದಿವಾ ಸಂಜೆಯಲಿಘನ||ಪುಂಜ ಸುಗುಣಮಣಿ ಮಂಜರಿ ಅರ್ಥ ಪ- |ರಂಜಳ ತಿಳಿಸೋ ಧನಂಜಯ ರಕ್ಷ 5
********

No comments:

Post a Comment