Sunday 10 November 2019

ಅಂಜರು ಹರಿಭಟರು ದುರಿತಾರಿಗಂಜರು ankita prasannavenkata

by ಪ್ರಸನ್ನವೆಂಕಟದಾಸರು
ಅಂಜರು ಹರಿಭಟರು ದುರಿತಾರಿಗಂಜರು ಹರಿಭಟರುಮಂಜಿನ ದಂಡೋಡಿಪ
ಮೂಡಣವರಕಂಜಸಖನ ಪೋಲ್ವವರು ಪ.

ಅಗ್ಗಳಿಕೆಯೈಗಣೆಯನ ಬಲದಲಿಮುಗ್ಗದೆ ಕುಲಿಶೆದೆಯಲ್ಲಿ ವೈರಾಗ್ಯಾಸ್ತ್ರದಿ ಈರೈದಾಳಾಣ್ಮನಕುಗ್ಗಿಸಿ ಸೆರೆ ತರುವವರು 1

ಮೂರರಾಯುಧ ಹತಿಭಯಜರಿದುವಾರಣನಾಕೆರಡಿರಿದು ಶೃಂಗಾರದ ರಾಹುತರೆಂಟರ ಸದೆವರುವೀರಹರಿಧ್ವನಿಯವರು2

ಎರಡೊಂಬತ್ತು ನಾದಿಕಾಭೇರಿಎರಡು ಕಹಳೆಯ ಚೀರಿಸರಕುಮಾಡಿ ನವಕಲಿ ಸಂಜಿತರುಹರಿಮಂಡಿತ ನವರಥರು3

ಒಂದೆ ನಿಷ್ಠೆಯ ರಣಧ್ವಜ ಮೇರೆಗೆಹಿಂದಾಗದೆ ಮುಂದಾಗಿಒಂದಿಪ್ಪತ್ತರಿ ವ್ಯೂಹ ಕೆಡಹುವರುಕುಂದದ ಧೃತಿ ಮತಿಯವರು 4

ಹಂಗಿನ ಸ್ವರ್ಗವ ಸೂರ್ಯಾಡುವರುಡಂಗುರ ಹೊಯ್ಯುವ ಮಹಿಮರುರಂಗ ಪ್ರಸನ್ವೆಂಕಟಪತಿ ಭಟರುಮಂಗಳಪದ ಲಂಪಟರು 5
********

No comments:

Post a Comment