Thursday, 14 November 2019

ಭಕ್ತವತ್ಸಲನೆಂಬ ಚಿಹ್ನೆ ನಿನಗೆಯುಕ್ತವಲ್ಲದೆ ankita prasannavenkata

by ಪ್ರಸನ್ನವೆಂಕಟದಾಸರು
ಭಕ್ತವತ್ಸಲನೆಂಬ ಚಿಹ್ನೆ ನಿನಗೆಯುಕ್ತವಲ್ಲದೆ ಆರಿಗೊಪ್ಪುವುದು ಕೃಷ್ಣ ಪ.

ಎಲ್ಲ ಜಗದ ತಂದೆ ನಿನ್ನ ಮಗ ಆ ನಂದನೊಲ್ಲಭೆಯ ಕಂದನಾದಚೆಲ್ಲುವೆ ಅರಸಿ ನಿನ್ನಂಗನೆ ಲಕುಮವ್ವಗೊಲ್ಲತೇರಿಗೆಂತು ಸೋತಿದ್ದೆ ಸ್ವಾಮಿ 1

ಮಂದಿ ರಾಜಾಂಡಕೋಟಿಗೆ ಗುರುವರ್ಯ ನೀನುಸಾಂದೀಪನi್ಞ್ಯಳಿಗವ ಮಾಡ್ದೆಮಂದಜಾಸನಆ ವಾಯು ನಿನ್ನ ಓಲೈಸುತಿರೆಕಂದನೆನಿಸಿದೆ ಯಶೋದಾದೇವಿಗೆ ಸ್ವಾಮಿ 2

ಮೂರು ಚಾವಡಿ ಪಾರುಪತ್ಯದ ಪ್ರಭುವೆ ನೀನೇರಿದೆ ನರನ ಬಂಡಿಯನುದ್ವಾರಕೆಯ ಅರಸೆ ನೀ ಚೀರಿದರೋಡಿ ಬಂದುಆ ರಮಣಿಯಮಾನಉಳಿಸಿದೆ ಸ್ವಾಮಿ3

ಮುಕ್ತದ್ರುಹಿಣರಿಂದಸೇವ್ಯನೀ ಧರ್ಮನಮಖದೊಳೆಂಜಲ ಪತ್ರ ತೆಗೆದೆಪ್ರಕಟಿತನಿತ್ಯಮಹಾತೃಪ್ತ ನೀ ವಿದುರನಕಕುಲತೆಯ ಔತಣಗೊಂಡು ಮುದಿಸಿದೆ ಸ್ವಾಮಿ 4

ಹಲವು ಶ್ರ್ರುತಿಗಳಿಗೆ ನೀ ನಿಲುಕದೆ ನೆನೆದವಗೆಸುಲಭದಿ ಪೊರೆವ ಉದಾರಿಬಲದ ಮ್ಯಾಲೊಲಿಯುವ ದೊರೆಯಲ್ಲ ಭಕ್ತರಛಲರಕ್ಷ ಪ್ರಸನ್ನವೆಂಕಟ ಜಗದಧ್ಯಕ್ಷ ಸ್ವಾಮಿ 5
*********

No comments:

Post a Comment