Friday, 27 December 2019

ನೋಡಿದೆ ಗುರುಗಳ ನೋಡಿದೆ ankita shreeda vittala raghuttama teertha stutih

ನೋಡಿದೆ ಗುರುಗಳ ನೋಡಿದೆ ||Pa||

ನೋಡಿದೆನು ಗುರುಗಳ ಪಾದಾಬ್ಜವ
ಪಾಡಿದೆನು ಸನ್ಮಹಿಮೆಗಳ ನಾ
ಬೇಡಿದೆನು ಮನದಣಿಯೆ ವರಗಳ
ಈಡು ಇಲ್ಲದೆ ಕೊಡುವ ಪ್ರಭುಗಳ ||a.pa||

ಪಂಚಕೃಷ್ಣಾರಣ್ಯಕ್ಷೇತ್ರ ಪಿನಾಕಿಯ ತೀರದಲ್ಲಿ ನಿಂತು
ಮಿಂಚುತಿಹ ಕಾಷಾಯದಂಡ ಕಮಂಡಲವ ಧರಿಸುತ್ತ ಧರೆಯೊಳು
ಪಂಚಬಾಣದ ಪಿತನ ಗುಣಗಳ ಅಂಚೆಯದಿ ಪೊಗಳುತ್ತ ಹರುಷದಿ
ಸಂಚಿತಾಗಾಮಿಗಳ ಕಳೆದು ಪ್ರಪಂಚದಲಿ ಮೆರೆವಂಥ ಗುರುಗಳ ||1||

ಅಲವಬೋಧರ ಭಾಷ್ಯಟೀಕಾ ಭಾವವನು ಸುಜನರಿಗೆ ಬೋಧಿಸಿ
ಕಲುಷಮತಗಿರಿ ಸಮುದ(ದಾ)ಯಂಗಳ ಕುಲಿಶದಂದಲಿ ಖಂಡಿಸುತಲಿ
ಮೂಲರಾಮ ದಿಗ್ವಿಜಯರಾಮರ ಪಾದಕಮಲಕೆ ಭೃಂಗನೆನಿಸುತ
ಶೀಲಭಕ್ತಿ ವಿರಕ್ತಿಮತಿಗಳ ಪಾಲಿಸುತ ಯತಿಮೌಳಿ ರತುನರ ||2||

ಕಾಮಧೇನು ಸುಕಲ್ಪತರು ಚಿಂತಾಮಣಿಯವೋಲ್ ಕಾಮಿತಾರ್ಥವ
ಪ್ರೇಮದಲಿ ಬೀರುತ್ತ ಅಧ್ಯಾತ್ಮದಿ ತಾಪತ್ರಯ ಕಳೆಯುವ
ಸ್ವಾಮಿ ಶ್ರೀಹರಿ ಶ್ರೀದವಿಠಲನ ದಾಸಾಗ್ರಣಿಯೆನಿಸಿ ಮರೆವರ
ನೇಮದಿಂದಲಿ ಶ್ರೀ ರಘೂತ್ತಮ ಮೌನಿವರ್ಯರ ಕರುಣ ಬಯಸುತ||3||
*******

No comments:

Post a Comment