Friday 27 December 2019

ಕಂಡ್ಯಾ ಕಂಡ್ಯಾ ಕಂಡ್ಯಾ ಕಂಡ್ಯಾ ಕಂಡ್ಯಾ ಕೂಸಿನ್ನ ankita indiresha

ಕಂಡ್ಯಾ ಕಂಡ್ಯಾ ಕಂಡ್ಯಾ ಕಂಡ್ಯಾ ಕಂಡ್ಯಾ ಕೂಸಿನ್ನಚಂಡನಾಡುತಾಲೆ ಬಾಲೆರ್ಹಿಂಡು ಕೂಡಿ ಬಂದನಂತೆ ಪ

ದಂಡದಿಂದ ಚಿನ್ನಿ ಬಾಲೇರ್ಹಿಂದಿನೋಳು ಚಿಮ್ಮಿದನಂತೆಕಂಡಕಂಡ ನಾರಿಯರೆಲ್ಲ ಪುಂಡ ಕೃಷ್ಣರೆಂಬರಂತೆ ೧

ದುಂಡು ಮುಖದೊಳಿಟ್ಟು ವೇಣುದಂಡವನೂದಲು ಕೃಷ್ಣಹಿಂಡು ನವಿಲು ಪಕ್ಷಿಗಳು ಮಂಡಲ ಕಟ್ಟಿದವಂತೆ ೨

ದೃಷ್ಟಿಯಾದೀತೆಂದು ಕೂಸಿಗೆ ಎಷ್ಟು ಹೇಳಿದೆ ಮನೆಬಿಟ್ಟು ಪೋಗಬ್ಯಾಡೆಂದರೆ ಕೃಷ್ಣ ಘಳಿಗೆ ನಿಲ್ಲವಲ್ಲ ೩

ಇಂದಿರೇಶ ಎನ್ನ ಮನೆ ಮುಂದಲಾಡೆಂದ್ಹೇಳಿದರೆನಂದ ವೃಜದಿ ಪೊಕ್ಕು ಬಹಳ ದುಂದು ಮಾಡುವನು ಕೃಷ್ಣ ೪
********

No comments:

Post a Comment