ಬಿಹಾಗ್ ರಾಗ ದಾದರಾ ತಾಳ
ಮುತ್ತು ಕೊಳ್ಳಿರೋ ಉತ್ತಮರೆಲ್ಲ ||ಧ್ರುವ||
ಜ್ಞಾನಸಮುದ್ರದಲಿನ್ನು ಧ್ಯಾನವೆಂಬ ಸಿಂಪಿನೊಳು
ಘನಗುರುಕರುಣದ ಮಳೆಯಾದ ಮುತ್ತು ಕೊಳ್ಳಿರೋ ||೧||
ಪಿಂಡಬ್ರಹ್ಮಾಂಡವೆಂಬ ಗಡ್ಡೆಯೊಳಿನ್ನು
ಪುಟ್ಟಿ ಭಕ್ತಿಭಾವ ಹಡಗದೊಳು ಬಂದ ಮುತ್ತು ಕೊಳ್ಳಿರೋ ||೨||
ಸಾಧು ಸಜ್ಜನರೆಂಬ ಮುತ್ತಿನ ಜೋಹರೇರ ಕೈಯ
ನಿಜಹಸ್ತಸ್ಪರ್ಶವಾದ ನೀವು ಮುತ್ತು ಕೊಳ್ಳಿರೋ ||೩||
ಅತ್ತಲಿತ್ತಲಾಗದೆ ಈ ಮುತ್ತು ಜತನಮಾಡಿ
ನಿಮ್ಮ ಚಿತ್ತ ಮನದೊಳು ಇಟ್ಟುಕೊಳ್ಳಿರೋ ||೪||
ತನುಮನಧನವನರ್ಪಿಸಿಕೊಂಡಿಹ ಮುತ್ತು
ಮಹಿಪತಿ ಇಹಪರವಸ್ತು ಮುತ್ತು ಕೊಳ್ಳಿರೋ ||೫||
***
ಮುತ್ತು ಕೊಳ್ಳಿರೋ ಉತ್ತಮರೆಲ್ಲ ||ಧ್ರುವ||
ಜ್ಞಾನಸಮುದ್ರದಲಿನ್ನು ಧ್ಯಾನವೆಂಬ ಸಿಂಪಿನೊಳು
ಘನಗುರುಕರುಣದ ಮಳೆಯಾದ ಮುತ್ತು ಕೊಳ್ಳಿರೋ ||೧||
ಪಿಂಡಬ್ರಹ್ಮಾಂಡವೆಂಬ ಗಡ್ಡೆಯೊಳಿನ್ನು
ಪುಟ್ಟಿ ಭಕ್ತಿಭಾವ ಹಡಗದೊಳು ಬಂದ ಮುತ್ತು ಕೊಳ್ಳಿರೋ ||೨||
ಸಾಧು ಸಜ್ಜನರೆಂಬ ಮುತ್ತಿನ ಜೋಹರೇರ ಕೈಯ
ನಿಜಹಸ್ತಸ್ಪರ್ಶವಾದ ನೀವು ಮುತ್ತು ಕೊಳ್ಳಿರೋ ||೩||
ಅತ್ತಲಿತ್ತಲಾಗದೆ ಈ ಮುತ್ತು ಜತನಮಾಡಿ
ನಿಮ್ಮ ಚಿತ್ತ ಮನದೊಳು ಇಟ್ಟುಕೊಳ್ಳಿರೋ ||೪||
ತನುಮನಧನವನರ್ಪಿಸಿಕೊಂಡಿಹ ಮುತ್ತು
ಮಹಿಪತಿ ಇಹಪರವಸ್ತು ಮುತ್ತು ಕೊಳ್ಳಿರೋ ||೫||
***
ಮುತ್ತು ಕೊಳ್ಳಿರೋ ಉತ್ತುಮರೆಲ್ಲ ಪ
ಜ್ಞಾನ ಸಮುದ್ರಲಿನ್ನು ಧ್ಯಾನವೆಂಬ ಸಿಂಪಿನೊಳು ಘನಗುರುಕರುಣದ ಮಳಿಯಾದ ಮುತ್ತು ಕೊಳ್ಳಿರೋ 1
ಪಿಂಡ ಬ್ರಹ್ಮಾಂಡವೆಂಬ ಗಡ್ಡೆಯೊಳಿನ್ನು ಪುಟ್ಟಿ ಭಕ್ತಿಭಾವ ಹಡಗದೊಳು ಬಂದ ಮುತ್ತು ಕೊಳ್ಳಿರೋ 2
ಸಾಧುಸಜ್ಜನರೆಂಬ ಮುತ್ತಿನ ಜೋಹರೇರ ಕೈಯ ನಿಜಹಸ್ತಸ್ಪರ್ಶವಾದು ನೀವು ಮುತ್ತು ಕೊಳ್ಳಿರೋ 3
ಅತ್ತಲಿತ್ತಲಾಗದೆ ಈ ಮುತ್ತು ಜತನಮಾಡಿ ನಿಮ್ಮ ಚಿತ್ತ ಮನದೊಳು ಇಟ್ಟುಕೊಳ್ಳಿರೋ 4
ಮುತ್ತು ಮಹಿಪತಿ ಇಹರಪವಸ್ತು ಮುತ್ತು ಕೊಳ್ಳಿರೋ 5
***
No comments:
Post a Comment