Wednesday, 11 December 2019

ಸೋಜಿಗವಾಯಿತು ಸದ್ಗುರುವಿನ ಕೃಪೆ ankita mahipati

ಕಾಂಬೋಧ (ಭೂಪ್) ರಾಗ ತ್ರಿತಾಳ

ಸೋಜಿಗವಾಯಿತು ಸದ್ಗುರುವಿನ ಕೃಪೆ ಹೇಳಲೇನು
ನಿಜಗುಹ್ಯದ ಮಾತು ಗುರುತವಾಗಿಹ ಸಾಧು ಬಲ್ಲ ಖೂನ ||ಧ್ರುವ||

ನೀಗದ ನೀಗಿತು ಹೋಗದ ಹೋಯಿತು ತ್ಯಾಗಲ್ಯೊಂದು
ಬಾಗದ ಬಾಗಿತು ಸಾಗದ ಸಾಗಿತು ಯೋಗಲ್ಯೊಂದು
ಆಗದ ಆಯಿತು ಕೂಗದ ಕೂಗಿತು ಈಗಲ್ಯೊಂದು
ತೂಗದ ತೂಗಿತು ಸುಗಮ ತಾ ತೋರಿತು ಜಗದೊಳೊಂದು ||೧||

ಹರಿಯದ ಹರಿಯಿತು ಮುರಿಯದ ಮುರಿಯಿತು ಹುರಿಯಲೊಂದು
ಮರೆಯದ ಮರೆಯಿತು ಅರಿಯದ ಅರಿಯಿತು ಅರಿವಿಲೊಂದು
ಸುರೆಯದ ಸುರಿಯಿತು ಗರೆಯದ ಗರಿಯಿತು ತ್ಯರಿಯಲೊಂದು
ಜರಿಯದ ಜರಿಯಿತು ಬೆರಿಯದ ಬೆರೆಯಿತು ಕುರಿವಿಲೊಂದು ||೨||

ಜಾರದ ಜಾರಿತು ಮೀರದ ಮೀರಿತು ಹಾರಲೊಂದು
ತೋರದ ತೋರಿತು ಸೇರದ ಸೇರಿತು ಸಾರಲೊಂದು
ಬೀರದ ಬೀರಿತು ಸಾರಸದೋರಿತು ಕರದಲೊಂದು
ತರಳ ಮಹಿಪತಿಗ್ಹರುಷವಾಯಿತು ಗುರುಕರುಣಲಿಂದು ||೩||
****

ಸೋಜಿಗವಾಯಿತು ಸದ್ಗುರುವಿನ ಕೃಪೆ ಹೇಳಲೇನು ನಿಜಗುಹ್ಯದ ಮಾತು ಗುರುತವಾಗಿ ಹ್ಯ ಸಾಧು ಬಲ್ಲ ಖೂನ ಪ  


ನೀಗದ ನೀಗಿತು ಹೋಗದ ಹೋಯಿತು ತ್ಯಾಗಲ್ಯೊಂದು ಬಾಗದ ಬಾಗಿತು ಸಾಗದ ಸಾಗಿತು ಯೋಗಲ್ಯೊಂದು ಆಗದ ಆಯಿತು ಕೂಗದ ಕೂಗಿತು ಈಗಲ್ಯೊಂದು ತೂಗದ ತೂಗಿತು ಸುಗಮ ತಾ ತೋರಿತು ಜಗದೊಳೊಂದು 1 

ಹುರಿಯಲೊಂದು ಅರಿಯಿತು ಅರಿವಿಲೊಂದು ಸುರಿಯದ ಸುರಿಯಿತು ಗರೆಯದ ಗರಿಯಿತು ತ್ಯರಿಯಲೊಂದು ಜರಿಯದ ಜರಿಯಿತು ಬೆರಿಯದೆ ಬೆರಿಯಿತು ಕುರಿವಿಲೊಂದು 2

ಜಾರದ ಜಾರಿತು ಮೀರದ ಮೀರಿತು ಹಾರಲೊಂದು ತೋರದ ತೋರಿತು ಸೇರದ ಸೇರಿತು ಸಾರಲೊಂದು ಬೀರದ ಬೀರಿತು ಸಾರಸದೋರಿತು ಕರದಲೊಂದು ತರಳ ಮಹಿಪತಿಗ್ಹರುಷವಾಯಿತು ಗುರುಕರುಣಲಿಂದು 3

****

No comments:

Post a Comment