Thursday, 12 December 2019

ಗಳಿಸಿಕೊಳ್ಳಿರೊ ಸಾಧು ಸಜ್ಜನರ ಸಂಗವ ankita mahipati

ಚಾಂದ್ ರಾಗ ತೀನ್ ತಾಳ

ಗಳಿಸಿಕೊಳ್ಳಿರೊ ಸಾಧು ಸಜ್ಜನರ ಸಂಗವ
ಗಳಿಗೆಯೊಳು ದೋರಿಕೊಡುವರು ಅಂತರಂಗವ ||ಧ್ರುವ||

ಹೊಟ್ಟಿಗೆ ಮೊಟ್ಟಿಗೆ ಕೆಟ್ಟು ಹೋಗಬ್ಯಾಡಿರೊ
ಹುಟ್ಟಿಬಂದಮ್ಯಾಲೆ ಹರಿನಾಮ ಘಟ್ಟಿಗೊಳ್ಳಿರೊ
ಗುಟ್ಟಿಲಿದ್ದ ವಸ್ತು ನೀವು ಮುಟ್ಟಿ ಮನಗಾಣಿರೊ
ಕೆಟ್ಟ ಗುಣಕಾಗಿ ಬಿದ್ದು ಸಿಟ್ಟು ಹಿಡಿಯಬ್ಯಾಡಿರೊ ||೧||

ಹೊನ್ನಿಗೆ ಹೆಣ್ಣಿಗೆ ಬಾಯಿ ತೆರಿಯಬ್ಯಾಡಿರೊ
ಕಣ್ಣುಗೆಟ್ಟು ಹೋಗಿ ದಣ್ಣನೆ ದಣಿಯಬ್ಯಾಡಿರೊ
ಹೆಣ್ಣಿಗಾಗಿ ರಾವಣೇನು ಪಡೆದುಕೊಂಡ ಕಾಣಿರೊ
ಹೊನ್ನಿಗಾಗಿ ವಾಲಿ ಏನು ಸುಖವ ಪಡೆದ ನೋಡಿರೊ ||೨||

ಉರ್ವಿಯೊಳು ಬಂದು ನೀವು ಗರ್ವ ಹಿಡಿಯಬ್ಯಾಡಿರೊ
ಕೌರವೇಶ ಮಣ್ಣಿಗೆ ಗರ್ವಹಿಡಿದು ಕೆಟ್ಟನೋಡಿರೊ
ಅರ್ವಪಥವ ಬಿಟ್ಟು ಮರ್ಮಿಗ್ಹೋಗಬ್ಯಾಡಿರೊ
ಸರ್ವ ಸಾರಾಯ ಸುಖ ಹರಿಯ ಭಕ್ತಿ ಮಾಡಿರೊ ||೩||

ಕಾಮ ಕಳವಳಿಗಿನ್ನು ಕುಣಿದು ಕೆಡಬ್ಯಾಡಿರೊ
ನೇಮದಿಂದ ಸ್ವಾಮಿ ಶ್ರೀಪಾದ ಬೆರೆದು ಕೂಡಿರೊ
ನಾಮರೂಪಕಾಗಿ ಬಿದ್ದು ಹಮ್ಮು ಹಿಡಿಯಬ್ಯಾಡಿರೊ
ತಾಮಸೆಂಬ ದೈತ್ಯನ ಸುಟ್ಟು ಹೋಮ ಮಾಡಿರೊ ||೪||

ಕಳೆಯಬೇಕು ನೋಡಿ ಭವಬಂಧನದ ದುಸ್ತರ
ಹೋಳಿಯಾಡಬೇಕು ಒಂದೆ ಸೀಳಿ ಮದಮತ್ಸರ
ಹೇಳಿಕೊಟ್ಟ ಗುರುವಿನ ಕೊಂಡಾಡಬೇಕು ಎಚ್ಚರ
ಕೇಳಬೇಕು ಒಂದೆ ನೋಡಿ ಜ್ಞಾನಬೋಧ ಶಾಸ್ತರ ||೫||

ಲೋಕವೆಲ್ಲ ಬಂದು ಹೊನ್ನು ಹೆಣ್ಣು ಮಣ್ಣಿಗಾಯಿತು
ಬೇಕಾದ ವಸ್ತು ಬಿಟ್ಟು ಪೋಕುಬುದ್ಧಿಗ್ಹೋಯಿತು
ಸುಖ ಸೂರೆಗೊಳ್ಳದೆ ತೇಕಿ ದಣಿದುಹೋಯಿತು
ಏಕವಾಗಿ ನೋಡಲು ದೈಥೊಯ್ಯಗೊಟ್ಟಿತು ||೬||

ಮಹಿಪತಿಯ ಸ್ವಾಮಿಯ ನೆನೆದು ಒಮ್ಮೆ ನೋಡಿರೊ
ಇಹಪರಸುಖ ಸೂರ್ಯಾಡಿ ನಲಿದಾಡಿರೊ
ಮಹಾಮಹಿಮೆದೋರುತದೆ ಮೈಯ ಮರಿಯಬ್ಯಾಡಿರೊ
ತ್ರಾಹಿ ತ್ರಾಹಿ ಎಂದು ಮನಗಂಡು ಕುಣಿದಾಡಿರೊ ||೭||
****

ಗಳಿಸಿಕೊಳ್ಳಿರೊ ಸಾಧು ಸಜ್ಜನರ ಸಂಗವ ಗಳಿಗಿಯೊಳು ದೋರಿಕೊಡುವರು ಅಂತರಂಗವ ಪ 

ಹೊಟ್ಟಿಗೆ ಮೊಟ್ಟಿಗೆ ಕಟ್ಟು ಹೋಗಬ್ಯಾಡಿರೊ ಹುಟ್ಟಿಬಂದ ಮ್ಯಾಲೆ ಹರಿನಾಮ ಘಟ್ಟಗೊಳ್ಳಿರೊ ಗುಟ್ಟಲಿದ್ದ ವಸ್ತು ನೀವು ಮುಟ್ಟಿ ಮನಗಾಣಿರೊ ಕೆಟ್ಟ ಗುಣಕಾಗಿ ಬಿದ್ದು ಸಿಟ್ಟು ಹಿಡಿಯಬ್ಯಾಡಿರೊ 1 
ಹೊನ್ನಿಗೆ ಹೆಣ್ಣಿಗೆ ಬಾಯಿ ತೆರಿಯಬ್ಯಾಡಿರೊ ಕಣ್ಣಗೆಟ್ಟು ಹೋಗಿ ನೀವು ದಣ್ಣನೆ ದಣಿಯಬ್ಯಾಡಿರೊ ಹೆಣ್ಣಿಗಾಗಿ ರಾವಣೇನು ಪಡೆದುಕೊಂಡ ಕಾಣಿರೊ ಹೊನ್ನಿಗಾಗಿ ವಾಲಿ ಏನು ಸುಖವ ಪಡೆದ ನೋಡಿರೊ 2 
ಉರ್ವಿಯೊಳು ಬಂದು ನೀವು ಗರ್ವಹಿಡಿಯ ಬ್ಯಾಡಿರೊ ಕೌರವೇಶ ಮಣ್ಣಿಗೆ ಗರ್ವಹಿಡಿದು ಕೆಟ್ಟ ನೋಡಿರೊ ಅರ್ವಪಥವ ಬಿಟ್ಟು ಮರ್ವಿಗ್ಹೋಗಬ್ಯಾಡಿರೊ ಸರ್ವಸಾರಾಯ ಸುಖ ಹರಿಯ ಭಕ್ತಿ ಮಾಡಿರೊ 3 
ಕಾಮ ಕಳವಳಿಗಿನ್ನು ಕುಣಿದು ಕೆಡಬ್ಯಾಡಿರೊ ನೇಮದಿಂದ ಸ್ವಾಮಿ ಶ್ರೀಪಾದ ಬೆರೆದು ಕೂಡಿರೊ ನಾಮರೂಪಕವಗಿ ಬಿದ್ದು ಹಮ್ಮು ಹಿಡಿಯಬ್ಯಾಡಿರೊ ತಾಮಸೆಂಬ ದೈತ್ಯನ ಸುಟ್ಟು ಹೋಮಮಾಡಿರೊ 4 
ಭವ ಬಂಧವಾದ ದುಸ್ತರ ಹೋಳಿಯಾಡಬೇಕು ಒಂದೆ ಸೀಳಿ ಮದಮತ್ಸರ ಹೇಳಿಕೊಟ್ಟ ಗುರುವಿನ ಕೊಂಡಾಡಬೇಕು ಎಚ್ಚರ ಬೋಧ ಶ್ಯಾಸ್ತರ 5 
ಲೋಕವೆಲ್ಲ ಬಂದು ಹೊನ್ನ ಹೆಣ್ಣು ಮಣ್ಣಿಗಾಯಿತು ಬೇಕಾದ ವಸ್ತು ಬಿಟ್ಟು ಪೋಕುಬುದ್ಧಿಗ್ಹೋಯಿತು ಸುಖ ಸೂರೆಗೊಳ್ಳದೆ ತೇಕಿ ದಣಿದುಹೋಯಿತು ಏಕವಾಗಿ ನೋಡಲು ದೈಥಯ್ಯಗೊಟ್ಟಿತು 6 
ಮಹಿಪತಿಯ ಸ್ವಾಮಿಯ ನೆನೆದು ಒಮ್ಮೆ ನೋಡಿರೊ ಇಹಪರಸುಖ ಸೂರ್ಯಾಡಿ ನಲಿದಾಡಿರೊ ಮಹಾಮಹಿಮೆದೋರುತದೆ ಮಯ್ಯ ಮರಿಯಬ್ಯಾಡಿರೊತ್ರಾಹಿತ್ರಾಹಿ ಎಂದು ಮನಗಂಡು ಕುಣಿದಾಡಿರೊ 7
****

No comments:

Post a Comment