Friday 27 December 2019

ಗುರುವಿನ ಮರೆಯಾದಿರಮ್ಮ ankita muddumohana vittala

ಗುರುವಿನ ಮರೆಯಾದಿರಮ್ಮ  ಪ

ಇತ್ತಸಿರಿ ಗುರುವಿನ ನೀನು
ಮನದೊಳು ನೆನೆಯಬÉೀಕಮ್ಮ ತಂಗಿ ಅ.ಪ

ಗುರುವಿನ ಮರೆತರೆ ನಿನಗೆ ಥರಥರ ನರಕ
ಥರಥರನರಕವ ಅನುಭವಿಸಬೇಕಮ್ಮ ತಂಗೀ 1

ಜ್ಞಾನಾನಂದಾತ್ಮಕನಾದ ಶ್ರೀಹರಿಯನ್ನು ಗುರು
ವಿನದ್ವಾರಾ ನೀ ತಿಳಿ ಮಂಗಳಾಂಗಿ 2

ಗುರುವೆ ತಂದೆಯು ಬಂಧು ಬಳಗಾವೆಂದು ಅ
ಕ್ಕರೆಯಿಂದ ನೀ ನೆನೆಯಬೇಕಮ್ಮಾ 3

ಗುರುವಿನ ಸೇವೆಯ ಮಾಡುತ್ತ ಗುರುಗಳ
ಕೃಪೆಗೆ ಪಾತ್ರರಾಗಿ ಬಾಳಬೇಕಮ್ಮಾ 4

ಮಂಗಳ ಮಹಿಮ ಶ್ರೀ ತಂದೆಮುದ್ದುಮೋಹನ್ನವಿಠಲ ದಾಸರೆ
ನಿನಗೆ ಸದ್ಗುರು ಎಂದು ತಿಳಿಯಮ್ಮ ತಂಗಿ
ಈ ಮಾತು ಪುಸಿಯಲ್ಲ ಮರೆಯಬೇಡಮ್ಮ ತಂಗೀ 5
***********

No comments:

Post a Comment