ಶ್ರೀರಂಗವಿಠಲನ ಶ್ರೀ ಮಕುಟಕೆ ಶರಣು ||ಪ||
ಶಿರದಲೊಪ್ಪುವ ನೀಲಕುಂತಳಕೆ ಶರಣು
ಸಿರಿ ಸಹೋದರನರ್ಧದವಳಿಗೆ ಶರಣು ||ಅ.ಪ||
ಸೊಂಪು ನೋಟದ ಚೆಲುವ ಸೋಗೆಗಣ್ಣಿಗೆ ಶರಣು
ಸಂಪಿಗೆಯ ಕುಸುಮಸಮ ನಾಸಿಕಕೆ ಶರಣು
ಗುಂಪುರತ್ನದ ಕರ್ಣಕುಂಡಲಗಳಿಗೆ ಶರಣು
ಇಂಪುದರ್ವಣನಿಭ ಕಪೋಲಗಳಿಗೆ ಶರಣು ||೧||
ಕುಂದಕುಟ್ಮಲ ಪೋಲ್ವ ದಂತಪಕ್ತಿಗೆ ಶರಣು
ಅಂದವಾಗಿರುವ ಬಿಂಬೋಷ್ಠಕೆ ಶರಣು
ಚಂದ್ರಿಕಾನಿಭ ಮುದ್ದು ಮಂದಹಾಸಕೆ ಶರಣು
ನಂದಗೋಪನ ಮುದ್ದು ಕಂದನಿಗೆ ಶರಣು ||೨||
ಅಬ್ಜನಾಭನ ದಿವ್ಯ ಕಂಬು ಕಂಠಕೆ ಶರಣು
ಅಬ್ಜಮುಖಿಯಿರುವ ವಕ್ಷಸ್ಥಳಕೆ ಶರಣು
ಕುಬ್ಜೆಯ ಡೊಂಕ ತಿದ್ದಿದ ಭುಜಗಳಿಗೆ ಶರಣು
ಅಬ್ಜಜಾಸನನ ಪೆತ್ತ ನಾಭಿಗೆ ಶರಣು ||೩||
ರನ್ನಗಂಟೆಗಳಿರುವ ನಿನ್ನ ಕಟಿಗೆ ಶರಣು
ಪೊನ್ನ ಕದಳೀ ಪೋಲ್ವ ತೊಡೆಗಳಿಗೆ ಶರಣು
ಪುನ್ನಾಗಕರಗೆತ್ತ ದ್ವಯ ನಿತಂಬಕೆ ಶರಣು
ಚೆನ್ನಾಗಿ ಕಾಣುವ ಸಮಜಾನುವಿಗೆ ಶರಣು ||೪||
ಮಂಗಳ ವೈಭೋಗಂಗಳ ಅಂಘ್ರಿದ್ವಯಕೆ ಶರಣು
ತುಂಗ ಕುಚಗಳ ಪಿಡಿದ ಕರಗಳಿಗೆ ಶರಣು
ಪೊಂಗೊಳಲನೂದುವಾ ಅಂಗುಲಿಗಳಿಗೆ ಶರಣು
ರಂಗವಿಠಲನ ಸರ್ವಾಂಗಕೆ ಶರಣು ||೫||
****
ನಾಟಿ ರಾಗ ಖಂಡಛಾಪು ತಾಳ (raga, taala may differ in audio)
No comments:
Post a Comment