ಇಂದಿನಿರುಳಿನ ಕನಸಿನಲಿ ಬಂದು
ಮುಂದೆ ನಿಂದುದ ಕಂಡೆನೆ ಗೋವಳನ ||ಪ||
ಆಣಿಮುತ್ತಿನ ಪೆಂಡೆಯದ ಕಾಲಂದುಗೆ ಗೆಜ್ಜೆ
ಜಾಣನಂಗಜನ ಪಿತನ ಕೈಯ ವೇಣು
ಮಾಣಿಕ್ಯದ ಕಂಕಣ ಹೊನ್ನುಡಿ ಘಂಟೆ
ವಾಣಿಯ ರಚನೆ ಎಲ್ಲಿಯು ಈ ಗೋವಳನ ||೧||
ಮೊಲ್ಲೆ ಮಲ್ಲಿಗೆ ಜೊಲ್ಲೆಯದ ಚಲ್ಲಣದ ಶಿರ
ದಲ್ಲಿ ಗುಂಜಿಯ ದಂಡೆಯ ಚೆಲ್ವ ಕಂಗಳ
ಗೋಪಿಯರ ಮೇಲೆ ಕಡೆಗಣ್ಣ
ಚೆಲ್ಲುತೊಯ್ಯನೆ ನಡೆದ ಗೋವಳನ ||೨||
ತಿತ್ತಿ ಮೌರಿ ಕೊಂಬು ಸುತ್ತಿದ ಕತ್ತ ತಾವಿಲಿ
ತುತ್ತೂರು ತೂರು ತೂರೆನುತ
ಚಿತ್ತವ ಮರುಳು ಮಾಡಿದನೆ ಪೊಂಗೊಳಲೂದಿ
ಮೊತ್ತದ ಗೋಪಿಯರನೆಲ್ಲ ಗೋವಳನ ||೩||
ಎಸಳುಕಂಗಳ ಢಾಳ ಶಶಿ ನೊಸಲ ತಿಲಕ
ಎಸೆವ ಬಿಂಬಾಧರದ
ಪೊಸ ಮುತ್ತಿನೋಲೆ ಮೂಕುತಿ ಹೊನ್ನುಡಿ ಘಂಟೆ
ಎಸೆವ ನೂಪುರ ಹಾಹೆಯ ಗೋವಳನ ||೪||
ಉಂಗುಟದಲಿ ಗಂಗೆಯಂಗಾಲಲವುಂಕೆ
ತುಂಗವೃಕ್ಷದ ಲಕ್ಷುಮೀ
ಮಂಗಳ ಮಹಿಮ ಭುಜಂಗಶಯನ ಸಿರಿ
ರಂಗವಿಠಲ ನೆರೆದ ಗೋವಳನ ||೫||
****
Indinirulina kanasinali bandu
Munde ninduda kandene govalana ||pa||
Animuttina pendeyada kalanduge gejje
Jananangajana pitana kaiya venu
Manikyada kankana honnudi gante
Vaniya racane elliyu I govalana ||1||
Molle mallige jolleyada callanada Sira
Dalli gumjiya dandeya celva kangala
Gopiyara mele kadeganna
Cellutoyyane nadeda govalana ||2||
Titti mauri kombu suttida katta tavili
Tutturu turu turenuta
Cittava marulu madidane pongolaludi
Mottada gopiyaranella govalana ||3||
Esalukangala dhala sasi nosala tilaka
Eseva bimbadharada
Posa muttinole mukuti honnudi gante
Eseva nupura haheya govalana ||4||
Ungutadali gangeyangalalavunke
Tungavrukshada lakshumi
Mangala mahima bujangasayana siri
Rangavithala nereda govalana ||5||
***
ರಾಗ : ಶುದ್ಧಸಾವೇರಿ ತಾಳ : ಅಟ್ಟ (raga, taala may differ in audio)
ಇಂದಿನಿರುಳಿನ ಕನಸಿನಲ್ಲಿ ಬಂದು
ಮುಂದೆ ನಿಂದುದ ಕಂಡೆನೆ ಗೋವಳನ ||ಪ||
ಆಣಿಮುತ್ತಿನ ವೆಂಡೆಯದ ಕಾಲಂದುಗೆ ಗೆಜ್ಜೆ
ಜಾಣನಂಗಜನ ಪಿತನ ಕೈಯ ವೇಣು
ಮಾಣಿಕ್ಯದ ಕಂಕಣ ಹೊನ್ನುಡಿ ಘಂಟೆ
ವಾಣಿಯ ರಚನೆ ಎಲ್ಲಿ[ಯು] ಈ ಗೋವಳನಾ ||೧||
ಮೊಲ್ಲೆ ಮಲ್ಲಿಗೆ ಚೊಲ್ಲೆಯದ ಚಲ್ಲಣದ ಶಿರ-
ದಲ್ಲಿ ಗುಂಜಿಯ ದಂಡೆಯ ಚೆಲ್ವ ಕಂಗಳ
ಗೋಪಿಯರ ಮೇಲೆ ಕಡೆಗಣ್ಣ
ಚೆಲ್ಲುತೊಯ್ಯನೆ ನಡೆದ ಗೋವಳನ ||೨||
ತಿತ್ತಿ ಮೌರಿ ಕೊಂಬು ಸುತ್ತಿದ ಕತ್ತ ತಾವಿಲಿ
ತುತ್ತುರೂ ತೂರು ತೂರೆನುತ
ಚಿತ್ತವ ಮರುಳು ಮಾಡಿದನೆ ಪೊಂಗೊಳಲೂದಿ
ಮೊತ್ತದ ಗೋಪಿಯರನೆಲ್ಲ ಗೋವಳನ ||೩||
ಎಸಳುಕಂಗಳ ಢಾಳ ಶಶಿ ನೊಸಲ ತಿಲಕ
ಎಸೆವ ಬಿಂಬಾಧರದ
ಪೊಸ ಮುತ್ತಿನೋಲೆ ಮೂಕುತಿ ಹೊನ್ನುಡಿ ಘಂಟೆ
ಎಸೆವ ನೂಪುರ ಹಾಹೆಯ(?) ಗೋವಳನ ||೪||
ಉಂಗುಟದಲಿ ಗಂಗೆಯಂಗಾಲಲವುಂಕೆ
ತುಂಗವಕ್ಷದ ಲಕ್ಷುಮೀ
ಮಂಗಳ ಮಹಿಮ ಭುಜಂಗಶಯನ ಸಿರಿ
ರಂಗವಿಠಲ ನೆರೆದ ಗೋವಳನ ||೫||
******
No comments:
Post a Comment