Friday, 6 December 2019

ರಾಮ ರಾಮ ರಾಮ ರಾಮ ರಾಮವೆನ್ನಿರೊ ರಾಮ purandara vittala

ಪುರಂದರದಾಸರು
ರಾಮ ರಾಮ ರಾಮ ರಾಮ ರಾಮವೆನ್ನಿರೊ |ರಾಮ ರಾಮವೆಂಬ ನಾಮ ಮನದಿ ನೆನೆಯಿರೊ ಪ.

ಇಂದ್ರಿಯಂಗಳೆಲ್ಲ ಕೂಡಿ ಬಂದು ತನ್ನ ಮುಸುಕಿದಾಗ |ಸಿಂಧುಸುತಾಪತಿಯ ಧ್ಯಾನ ಅಂದಿಗೆ ಒದಗಲೀಯದು1

ಭರದಿ ಯಮನ ಭಟರು ಬಂದು ಹೊರಡು ಎಂದು ಮುಟ್ಟಲು |ಕೊರಳಿಗಾತ್ಮ ಸೇರಿದಾಗ ಹರಿಯ ಧ್ಯಾನ ದೊರೆಯದಯ್ಯ 2

ಕಾಸಶ್ವಾಸದಲ್ಲಿ ಸಿಲುಕಿ ದೋಷ ಬಲಿದು ಪೋಗುವಾಗ |ವಾಸುದೇವನೆಂಬ ನಾಮ ವದನದಲ್ಲಿ ಒದಗದಯ್ಯ 3

ಶೃಂಗಾರವಾದ ದೇಹ ತಂಗಿಬಿಟ್ಟು ಪೋಗುವಾಗ |ಕಂಗಳಿಗಾತ್ಮಾ ಸೇರಿದಾಗ ರಂಗನ ಧ್ಯಾನ ದೊರಕದಯ್ಯ 4

ಕಷ್ಟಜನ್ಮದಲ್ಲಿ ಬಂದು ದುಷ್ಟಕರ್ಮಗಳನು ಮಾಡಿ |ಬಿಟ್ಟು ಹೋಗುವಾಗ ಪುರಂದರವಿಠಲನ ನೆನೆಮನವೆ 5
********

No comments:

Post a Comment