ಪುರಂದರದಾಸರು
ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯಬೆಳ್ಳಕ್ಕಿಯಂತೆ ನಿನ್ನ ಧ್ಯಾನವ ಮಾಡುವೆನಯ್ಯಾ ಪ
ಗಂಡು ಮುಳುಗಹಕ್ಕಿಯಂತೆ ನೀರ ಕಂಡ ಕಡೆಗೆ ಮುಳುಗಿಮಂಡೆಶೂಲೆಯಲ್ಲದೆ ಗತಿಯು ಇಲ್ಲಮಂಡೆಮುಸುಕನಿಕ್ಕಿ ಮಂತ್ರ ಜಪಿಸುವೆನಯ್ಯ1
ಗಾಣದೆತ್ತಿನಂತೆ ಕಣ್ಣಕಟ್ಟಿ ಪ್ರದಕ್ಷಿಣೆ ಮಾಡಿಕಾಣದೆ ನಾ ತಿರುಗಿದೆ ಕಂಡುದಿಲ್ಲಮಾಣಿಕ್ಯದ ರಾಶಿ ಅಡಿಗೆ ಕಂಗಳಯ್ಯನು ಪೋಗಿಆಣಿಕಾರಿಕೆ ಮಾಡಿದಂಥ ಈ ಕುಯುಕ್ತಿಯು 2
ಇಕ್ಕಳವ ಕೈಯ ಪಿಡಿದುಕೊಂಡು ಕಾದ ಕಬ್ಬಿಣದಂತೆಸಿಕ್ಕಿಸಿಕೊಂಡಲ್ಲದೆ ಗತಿಯು ಇಲ್ಲಪೊಕ್ಕಳ ಪೂವಿನ ಶ್ರೀ ಪುರಂದರವಿಠಲನೆಮಕ್ಕಳಾಟಿಕೆಯ ಬಿಡೊ ರಕ್ಷಿಸೊ ಎನ್ನೊಡೆಯ 3
************

No comments:
Post a Comment