ಪುರಂದರದಾಸರು
ಎಲೆ ಮನವೆ ನೀ ತಿಳಿಹರಿ ಸರ್ವೋತ್ತಮನೆಂದು |ಸುಲಲಿತಾತ್ಮನ ಭಜಿಸಿ ಸುಖಿಯಾಗೊ ಮನವೆ ಪ.
ಇಕ್ಷುದಂಡಗಳಿರಲು ಇಂಧನವ ಮೇಲೇಕೆ |ಅಕ್ಷಯ ಪಾತ್ರೆಯಿರಲು ಹಸಿವೆಯೆನಲೇಕೆ |ನಿಕ್ಷೇಪ ನಿಧಿಯಿರಲು ನಿರುತ ದಾರಿದ್ರ್ಯವೇಕೆ |ಪಕ್ಷಿವಾಹನನಿರಲು ಪರದೈವವೇಕೆ 1
ಸುರಧೇನು ಕೈಸೇರಿ ಸುಖವಿಲ್ಲವೆನಲೇಕೆ |ಗರುಡ ಮಂತ್ರವ ಜಪಿಸಿ ಗರಳಭಯವೇಕೆ ||ತರಣಿಕಿರಣಗಳಿರಲು ಹಲವು ಜ್ಯೋತಿಗಳೇಕೆ |ಮುರಹರನ ಪೂಜಿಸದೆ ಮುಂದುಗೆಡಲೇಕೇ 2
ಭಾವಶುದ್ಧಿಗಳಿರಲು ಬಯಲಡಂಬರವೇಕೆ |ದೇವತಾ ಸ್ತುತಿಯಿರದ ದೇಹವೇಕೆ ||ಆವಗಂ ಹರಿಯೆನದೆ ಅನ್ಯಚಿಂತೆಗಳೇಕೆ |ದೇವ ಪುರಂದರವಿಠಲನಿರಲು ಭಯವೇಕೆ 3
*******

No comments:
Post a Comment