Saturday, 7 December 2019

ಹಿಂದಿನ ಬವಣೆಗಳೆಲ್ಲ ಆಗಲೆ ಮರೆದೆಯೇನೊ purandara vittala

ಪುರಂದರದಾಸರು
ಹಿಂದಿನ ಬವಣೆಗಳೆಲ್ಲ ಆಗಲೆ ಮರೆದೆಯೇನೊ |ಇಂದುಬಂದ ಭಾಗ್ಯವು ನಿಜವೆ ವೆಂಕಟತಂದೆ?ಪ

ತಲೆಗೆ ಹುಲಗಲ ಹೂವಕಟ್ಟಿತುರುಗಳ ಕಾಯುತಲಿದ್ದೆ |ಹಲವು ರತ್ನದ ಮುಕುಟ ಈಗ ಇಟ್ಟಿಹೆನೆಂದು 1

ಒಪ್ಪಿಡಿಅವಲಕ್ಕಿಯನು ಒಪ್ಪದಿಂದ ಸವಿದೇ ಸವಿದೆ |ತಪ್ಪದೆ ಪಂಚಾಮೃತ ಉಂಡು ಸೊಕ್ಕಿದೆನೆಂದು 2

ಭಾಗ್ಯವು ಬಂದರೆ ಭಕ್ತರನು ಮರೆವರೆ ಸೌ-|ಭಾಗ್ಯವಂತ ನೀನುಪುರಂದರವಿಠಲ3
*********

No comments:

Post a Comment