ಪುರಂದರದಾಸರು
ಮಂದಿಯಗೊಡವೆ ಇನ್ನೇನು ಮಗಳೆ |ಮುಂದೆ ನೋಡಿ ಹಂಜಿ ನೂಲವ್ವ.ಪ.
ಕಣ್ಣ ಮುಂದಿನ ಕಸವನು ತೆಗೆದು |ಸಣ್ಣಗೆ ನೀ ನೂಲವ್ವ. ಅಪ
ವಸುಧೆಯ ದೊಡ್ಡ ಮಣೆಯಮಾಡಿ |ಶಶಿರವಿಗಳೆರಡು ಕಂಬವ ಹೂಡಿ ||ಆ ಸಿರಿರಂಗರ ಎರಡು ಚಕ್ರವ ಮಾಡಿ |ದರ್ಶನವೆಂಬುವ ನುಲಿಯನು ಬಿಗಿದು 1
ಪರಬ್ರಹ್ಮನಅಳವು ಮಾಡಿ |ಕುರುಡು ನಾಶಿಕ ಬೆನಕದಿ ತಿಕ್ಕಿ ||ಹರಿ ನೀನೆ ಎಂಬ ದಾರವಕಟ್ಟಿ |ವಿರತಿವಿಚಾರದ ಬೆಲ್ಲಗಳಿಕ್ಕಿ2
ಜಾÕನವೆಂಬುವ ಕದರನ್ನಿಕ್ಕಿ |ಮಾನಮದವೆಂಬ ಹಂಜಿಯ ಹಿಡಿದು ||ಧ್ಯಾನವೆಂಬ ಎಳೆಯನು ತೆಗೆದು |ಮೌನದಿಂದಲಿ ನೂಲವ್ವ 3
ಕಕ್ಕುಲಾತಿ ಕಾಂಕ್ಷೆಗಳೆಂಬ |ಸಿಕ್ಕುದೊಡಕುಗಳನೆ ಬಿಡಿಸಿ ||ಒಕ್ಕುಡಿತೆಯ ಮಾಡಿದ ಮನದಿ |ಕುಕ್ಕಡಿನೂಲು ಕೂಡಿ ಹಾಕಮ್ಮ 4
ಇಪ್ಪತ್ತೊಂದು ಸಾವಿರದ ಮೇ -ಲಿಪ್ಪ ನೂರು ಎಳೆಯನು ಹೊಡೆದು ||ತಪ್ಪದೆ ಹುಂಜವಕಟ್ಟಿ ನೀನು |ಒಪ್ಪದಿ ಸೀಳು ಇಳುವಮ್ಮ 5
ಸದ್ಯದಿ ನೀ ಜಾಡರಲ್ಲಿ |ಸಿದ್ಧಬದ್ಧ ಸೀಳುಗಳ ಹಾಕಿ ||ವಿದ್ಯೆಯೆಂಬುವ ಹಚ್ಚಡವನ್ನು |ಬುದ್ಧಿಯಿಂದಲಿ ನೇಯಿಸಮ್ಮ 6
ಒಪ್ಪುವಾತ್ಮ ಪರಮಾತ್ಮನೆಂಬ |ಒಪ್ಪ ಎರಡು ಹೋಳುಗಳಹಚ್ಚಿ ||ತಪ್ಪದೆ ಪುರಂದರವಿಠಲನ ಪಾದಕೆ |ಒಪ್ಪಿಸಿ ಕಾಲವ ಕಳೆಯಮ್ಮ 7
*********

No comments:
Post a Comment