ಇಂದು ಆರತಿ ತಂದು ಬೆಳಗಿರೆ ಇಂದಿರಾವರಗೆ
ಮಂದರಧರಗಿಂದು || ಪ ||
ನಂದಸುತನಿಗೊಂದಿಸುತಲಿ ಸಿಂಧು ಶಯನಗೆ
ಕುಂದರದನೆ || ಅ.ಪ ||
ನಂದಿ ವಾಹನ ವಂದಿತ ದಶ
ಕಂಧರಾಂತಗೆ ಕುಂದರದನೆ
ವಂದಿಸುವರ ಬಂಧ ಬಿಡಿಶ್ಯಾ
ನಂದಗರಿವಗೆ ಮಂದಗಮನೆ || 1 ||
ಅಂಗನೆಯರು ಶೃಂಗಾರದಲಿ
ಸಂಗೀತ ಪ್ರಿಯಗೆ ಭೃಂಗಾಲಕಿ
ಗಂಗಾಪಿತ ಮಂಗಳಾಂಗ ವಿ-
ಹರಿಗ ವಾಹನಗೇ ತಿಂಗಳಮುಖಿ || 2 ||
ನಾರಿಯಳ ನುದ್ಧಾರ ಮಾಡಿದ
ಚಾರು ಚರಣಗೆ ನಾರಿ ಮಣಿಯೆ
ಸೇರಿದವರ ಪೊರೆವ ಕಾರ್ಪರ
ನಾರಶಿಂಹಗೆ ಭೂರಿಮಹಿಮಗಿಂದು || 3 ||
****
No comments:
Post a Comment