ಗುರುರಾಯ ಪಾಲಿಸುವುದು ನೀ ಎನ್ನ ಪ
ಅನ್ಯರೊಬ್ಬರನಾ ನಾ ಕಾಣೆ ಮನ್ನಿಸಿ ಸಲಹುವರನಾ
ನಿನ್ನವನೊ ನಾನು ಅನುದಿನದಲಿ ನಿನ್ನ ನೆನೆದು
ನೆನೆದು ಇಂದಿನವರೆಗೆ ನಾ ದಿನಗಳೆದೆನೋ ಅ.ಪ.
ಇಷ್ಟುದಿನ ಪಟ್ಟ ಕಷ್ಟವು ಸಾಕೋ ಇಷ್ಟಕೆ ನೀ ದಯಾದೃಷ್ಟಿ
ಇಟ್ಟು ಜ್ಞಾನವ ಕೊಡಬೇಕೊ
ಕಪಟ ಬುದ್ಧಿಯನಷ್ಟು ಕಳೆದಿಷ್ಟವ ಪೂರೈಸಬೇಕೊ ಬಿಟ್ಟವನಲೊಜ್ಞಾನಾ
ಕೊಟ್ಟವರು ಪರಿಕರ ಬಿಟ್ಟವರು ಸರಿ ನಾ
ಕಟ್ಟಿಕೊಳ್ವೆ ತವ ಚರಣವ ಕೊರಳಿಗೆ 1
ಇಷ್ಟದಾಯಕನೆಂಬುವ ತವ ಬಿರುದು ನಾನೆಷ್ಟು ಪೇಳಲಿ
ಅಷ್ಟದಿಕ್ಕುಗಳಿಗೆ ಪರಿಹರಿಸಿಹುದೊ
ಇಷ್ಟೆಲ್ಲ ಕೇಳಿ ನಾ ಇಟ್ಟೆ ಮನವನು ತವ ಪಾದದಿ ತಿಳಿದು
ಸಂತುಷ್ಟನೆ ಎನ್ನ ಬಿಟ್ಟರೆ ಮುಂದಿನ ಬಟ್ಟೆಯ ಕಾಣದೇ
ಕೆಟ್ಟು ನಾ ಮೂರಾಬಟ್ಟೆಯಾಗುವೆನೋ 2
ಶ್ರೇಷ್ಠ ಹನುಮೇಶವಿಠಲನದಾಸಾ ದುಷ್ಟ ನಾನೆಂದರೆ ಸಿಟ್ಟಿನಿಂದಲಿ
ತವ ಪಾದದಿ ತುಳಿದು
ಮೆಟ್ಟಿ ಎನ್ನ ಶಿರ ಥಟ್ಟನೆ ಭೂಮಿಯಲಿ ಕೆಡಹುವುದು
ಹುಟ್ಟಿದರೆ ದಯವು ಅಟ್ಟಿ ಅಜ್ಞಾನವ ಕಟ್ಟಿ ಸುಜ್ಞಾನವ
ಘಟ್ಟಿ ಭಕುತಿಯನು ಕೊಟ್ಟು ನೀ ಪಾಲಿಸೊ 3
****
No comments:
Post a Comment