ಭೀಮಾ ಹೋ ಭಲಾರೆ ನಿಸ್ಸೀಮ ಹೋ ಭಾಪುರೆ ಹನುಮ ಹೋ ಪ.
ನಿಜಜಿತಕಾಮ ಹೋ ಕಾರುಣ್ಯಧಾಮ ಹೋ
ರಾಮಚಂದ್ರನ ಚರಣಕಮಲಸರಾಮ ಕಾರ್ಯಧುರಂಧರನೆ ಅ.ಪ.
ಆಂಜನೇಯ ಸುಕುಮಾರ ಅದ್ಭುತಮಹಿಮ ರಾಮ[ನ] ದೂತನೆ
ಅಂಜದುದಧಿಯ ದಾಟಿ ಅಸುರನ[ವ] ನವ ಕಿತ್ತನೆ
ಕಂಜಮುಖಿ ಜಾನಕಿಗೆ ಮುದ್ರೆಯನಿತ್ತ ಬಲುಪ್ರಖ್ಯಾತನೆ
ರಂಜಿಪ ಲಂಕಾನಗರವನು ಸುಟ್ಟು ರಾಜಕಾರ್ಯವ
ಮಾಡಿಸಿದೆ ಕಲಿ 1
ಅವನಿತನುಜೆಯ ಚೂಡಾರತ್ನವ ಅಂಬುಜಾಕ್ಷನಿಗಿತ್ತನೆ
ಸಮರಕನುಕೂಲವೆಂದು ರಾಮಗೆ ಸುಗ್ರೀವನ ಕಾಣಿಸಿದನೆ
ಕಮಲನಾಭನ ಆಜ್ಞೆಯಿಂದಲಿ ಕಪಿಬಲವ ಕೂಡಿಸಿದನೆ
ಸಮುದ್ರವನು ಕಟ್ಟಿ ಬಲವ ನಡೆಸಿದ
ಬಹುಪರಾಕ್ರಮಿಯಹುದಹುದೊ ಕಲಿ 2
ಅಗಳುಸಾಗರ ಮಧ್ಯದಲ್ಲಿಹ ನಗರವನು ಬಂದು ಮುತ್ತಿದೆ
ಬಗೆದು ಕಲ್ಮರಗುಂಡಿನಿಂದಲಿ ವಿಗಡದೈತ್ಯರ ಮಡುಹಿದೆ
ಬಗೆಬಗೆ ಮಯಾಜಾಲವನು ಗೆದ್ದು ಭರದೊಳದ್ರಿಯ ತುಡುಕಿದೆ
ಜಗತ್ಪತಿಯ ಮೂರ್ಬಲವನೆಲ್ಲವ ಸಂಜೀವನವ ತಂದುಳುಹಿದೆ 3
ಪೃಥ್ವಿಯೊಳಗುದ್ದಂಡ ದೈತ್ಯರ ಸುತ ಸಹೋದರರ ಮಡುಹಿದೆ
ಹತವ ಮಾಡಿ ಶ್ರೀರಾಮ ಬಾಣದಿ ಹತ್ತು ತಲೆಗಳ ಕೆಡಹಿದೆ
ಪ್ರತಿಶತೇಶ್ವರ ಶ್ರೀರಮಣಿಯನ್ನು ತಂದು ರಾಘವಗೆ ಒಡಗೂಡಿಸಿದೆ
ಅತಿಹರುಷದಿಂದ ಅಯೋಧ್ಯಾನಗರಿಗೆ ಪ್ರತಿಪ್ರವೇಶವ
ಮಾಡಿಸಿದೆ ಕಲಿ 4
ತೋರುತ್ತಿದೆ ಶಿಖಿ [ಕೈಪ] ಕುಂಡಲ ಚಾರು ಯಜÉ್ಞೂೀಪವೀತನೆ
ಸೂರ್ಯಚಂದ್ರಮರುಳ್ಳನಖ ವಜ್ರಕಾಯದಲಿ ನಿರ್ಭೀತನೆ
ವೀರಕದನಕಠೋರ ರಾಣಿಬೆನ್ನೂರ ಬಯಲಾಂಜನೇಯನೆನೀರಜಾಕ್ಷನ ಹೆಳವನಕಟ್ಟೆರಂಗನ ಪ್ರಿಯದಾಸನೆ ಕಲಿ 5
****
No comments:
Post a Comment