ತೋರಬಾರದೆ ನಿಮ್ಮ ಚರಿತೆಯನು
ನರರೊಳು ನಗೆಗೀಡು ಮಾಡದ ಹಾಗೆ ಪ.
ಕಲ್ಲೊಳು ಕಾಂತೆಯ ಮಾಡಿದವನೆಂ-
ದೆಲ್ಲರು ಜಗÀದೊಳು ಪೇಳುವರು
ಅಲ್ಲಿ ಮಾಡಿದ ಹಾಗೆ ಇಲ್ಲಿ ತೋರಿಸಿದರೆ
ಬಲ್ಲಿದನೆನ್ನೊಡೆಯ ದೊಡ್ಡವನೆಂದು ಸಾರುವೆ 1
ಅಹಹ ಕುಬುಜೆಯಳ ತನುವನ್ನೆತ್ತಿ
ಮಹಿಯೊಳು ಯುವತಿಯ ಮಾಡಿದೆಯೆಂಬರು
ಬಹು ಪರಾಕ್ರಮವನ್ನು ಈಗ ತೋರಿಸಿದರೆ
ಅಹುದೋ ಎನ್ನೊಡೆಯ ದೊಡ್ಡವನೆಂದು ಸಾರುವೆ 2
ನೀನೆ ಗತಿಯೆಂದು ಬಂದ ಭಕ್ತನ ಕ-
ಣ್ಣುನವ ತಿದ್ದಿ ನಿಜವ ತೋರಿಸಯ್ಯ
ದೀನದಯಾಳು ಹೆಳವನಕಟ್ಟೆ ರಂಗಯ್ಯ
ದಾನಿ ಎನ್ನೊಡೆಯ ದೊಡ್ಡವನೆಂದು ಹೊಗಳುವೆ 3
****
No comments:
Post a Comment