ಕಂಟಕದ ಭವ ಹರಿಸೊ ಕರುಣಾ ಜಲಧಿ
ನೆಂಟ ನೀನಾಗಿ ಹೃನ್ಮಂಟಪದೊಳಗೆ ಪ.
ಎಂಟಕ್ಷರ ನುತನೆ ಎಂಟು ರೂಪಾತ್ಮಕನೆ
ಎಂಟು ಮೂರು ತತ್ವ ನಿರ್ಮಿಸಿಹನೆ
ಎಂಟು ದಳದಲಿ ನಿಂತು ಎಂಟು ವಿಧ ಪ್ರೇರಿಸುತ
ಎಂಟು ದಿಕ್ಪತಿಗಳಿಂ ಸೇವೆ ಕೊಳುತಿಹನೆ 1
ಎಂಟು ವಿಧ ಕರ್ತೃವೆ ಎಂಟು ಭಾಗ್ಯಯುತನೆ
ಎಂಟು ಬಾಹು ಎಂಟು ಆಯುಧಧರನೆ
ಎಂಟು ಪತ್ನಿಯರಿಂದ ಎಂಟನೇ ಅವತಾರಿ
ನೆಂಟರೊಡನೆ ಜಗದ ಕಂಟಕರ ಸದೆದನೆ 2
ಎಂಟೆರಡು ಕಲೆಪೂರ್ಣ ವೆಂಕಟರಮಣನೆ
ಎಂಟು ವಿಧ ಮದಗಳನು ಭೇದಿಸುತಲಿ
ಎಂಟೆರಡು ಒಂದು ಇಂದ್ರಿಯ ನಿನ್ನ ಕಡೆ ಮಾಡಿ
ಭಂಟನೆನಿಸೆನ್ನ ಶ್ರೀ ಗೋಪಾಲಕೃಷ್ಣವಿಠಲ3
****
No comments:
Post a Comment