Sunday 1 August 2021

ಏನು ಮಹಿಮರೊ ನಮ್ಮ ಶ್ರೀ ಗುರುಗಳು ಶ್ರೀನಿಧಿಗೆ ankita gopalakrishna vittala tandemuddumohana dasa stutih

ಏನು ಮಹಿಮರೊ ನಮ್ಮ ಶ್ರೀ ಗುರುಗಳು

ಶ್ರೀನಿಧಿಗೆ ಪರಮ ಪ್ರಿಯರೆನಿಸಿ ಮೆರೆಯುವರು ಪ.


ಶಾಂತತ್ವವೆಂತೆಂಬ ಕವಚವನೆ ತೊಟ್ಟಿಹರು

ದಾಂತತ್ವದಾ ನಡುಕಟ್ಟು ಕಟ್ಟಿಹರು

ಸಂತೋಷ ಸುಖದಲಿ ಅಂತರಂಗದಿ ಹರಿಯ

ಚಿಂತನೆಯ ಮಾಡುತಲಿ ಮುಕ್ತಿಪೊಂದಿಹರು 1

ವೈರಾಗ್ಯವೆಂತೆಂಬ ಆಯುಧವ ಧರಿಸಿಹರು

ಸೇರಿದವರನು ಪೊರೆವ ಕಂಕಣವ ಕಟ್ಟಿ

ನಾರಸಿಂಹನ ನಾಮ ಕರ್ಣಭೂಷಣ ಧರಿಸಿ

ನಾರಾಯಣನ ಗುಣದ ಹಾರ ಧರಿಸಿಹರು 2

ಪರರಿಗುಪಕಾರವನೆಸಗುವ ಭುಜದ ಕೀರುತಿಯು

ವರತತ್ವ ಅರುಹುವ ವನಮಾಲಿಕೆಯು

ಸಿರಿ ಭಕ್ತಿಗುಣಗಳೆಂತೆಂಬೊ ವಸನಗಳು

ಧರಿಸಿರುವ ಮಹಿಮರ ಸರಿಗಾಣೆ ಜಗದಿ 3

ಕುಂದದೆ ಭಕ್ತರನು ಪೊರೆಯುವ ಭಾರದ

ಅಂದದಾ ಮುಕುಟ ಶಿರದಲ್ಲಿ ಧರಿಸಿ

ತಂದೆ ಮುದ್ದುಮೋಹನದಾಸರೆಂದೆನಿಸುತ

ಮಂದಜ್ಞ ಮನ ಪಾಪ ಪಾದುಕೆಯ ಮೆಟ್ಟಿಹರು 4

ಎಷ್ಟು ಹೇಳಲು ಸಾಧ್ಯ ಶ್ರೇಷ್ಠ ಗುರುಗಳ ಚರಿತೆ

ಪಟ್ಟವಾಳ್ವರು e್ಞÁನ ಸಾಮ್ರಾಜ್ಯವ

ಕೆಟ್ಟ ಭವರೋಗವನು ಸುಟ್ಟು ಭಸ್ಮವ ಮಾಡಿ

ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ತೋರ್ವರು5
****


No comments:

Post a Comment