Sunday 1 August 2021

ಕಟಕಟಾ ಕಂಡೆವಲ್ಲಾ ಕುಟಿಲವರ್ತನ ಕೆಲಕೆಲವು ಈ ಕಲಿಯುಗದೀ ankita vaikunta vittala

 ..

kruti by ಬೇಲೂರು ವೈಕುಂಠ ದಾಸರು belur vaikunta dasaru


ಕಟಕಟಾ ಕಂಡೆವಲ್ಲಾ

ಕುಟಿಲವರ್ತನ ಕೆಲಕೆಲವು ಈ ಕಲಿಯುಗದೀ ಪ


ಮಳೆಯಿಲ್ಲ ಬಂದರಿಳೆ ಬೆಳೆಯದು ಬೆಳೆಯೆ ಧರಣಿ

ಹುಲಿಸಿಲ್ಲ ಹುಲಿಸಾದರಿಲ್ಲಾ ಪ್ರಜೆಗೇ

ಸಲುವಕೋರಲ್ಪವನು ಬಿಡರು ರಾಜರುಗಳ ಹಾ

ವಳಿಯಲುಳುಹಿಲ್ಲ ಇನ್ನೆಂತು ಕೃಷಿಕರಿಗೇ 1


ಧನವಗಳಿಸಿಯೆ ಪಡುವುದನ್ಯಾಯವೇ ಮೊದಲು

ಮನವರಿತು ಪಾತಕಂಗಳ ಮಾಡುತಿಹರೂ

ಇನಿತು ಗಳಿಸಿದ ಕೃತ್ಯದರ್ಥಕ್ಕೆ ಚೋರರು

ಜನಪರೊಡೆಯರು ಬಯಲಮಮತೆಗಳ ಬಿಡರೂ 2


ಹುಸಿ ನುಸುಳು ಕಳವು ಕಕ್ಕುಲತೆ ಪರನಿಂದೆ ರಾ

ಕ್ಷಸಕೃತ್ಯ ಹಿಂಸೆ ಮತ್ಸರ ಅನಾಚಾರಾ

ಪಿಸುಣಿತೆ ಕುಹಕ ಕುಟಿಲ ಕುಮದ ಸ್ವಾಮಿದ್ರೋಹ

ವಸುಮತಿಯ ಸುರರ ವಧೆ ಘನವಾಯಿತಲ್ಲಾ 3


ತೊಡುವೊಡವೆಗಳ ಬೇಡಲೊಡನೆರಡು ಕಂಗಳಲಿ

ಕಿಡಿಸೂಸಿ ಬಾಯಿ ನೊರೆಸುತ್ತಿ ಘರ್ಜಿಸುತಾ

ಜಡಿವ ಕೋಪದಿ ಮಧುಪರಂತೆ ಜರೆವೀ ಬಾಯಿ

ಬಡುಕರೇ ಮೇದಿನಿಗೆ ಹೊರೆಯಾದರಲ್ಲಾ 4


ರಸನಬಿಡುವರು ಕಸವಪಿಡಿವರೊರೆಯನು ಪಿಡಿದು

ಬಿಸುಡುವರಲಗ ಪರುಸವನು ಬಿಟ್ಟು ಕಲ್ಲಾ

ಒಸೆದು ಬಿಡುವರು ಶ್ರೀ ವೈಕುಂಠಕೇಶವನಿರಲು

ನುಸಿ ದೈವಗಳ ಭಜಿಸಿ ಹಸಗೆಡುತಲಿಹರೂ 5

***


No comments:

Post a Comment