ಕುಲವ್ಯಾವುದಯ್ಯ ಕಪಿಕುಲನೆ ನಿನಗೆ
ಒಲಿದಿಹನು ಹರಿ ನಿನಗೆ ಎಂದು ಜನ ನುತಿಸುವರು ಪ.
ಮರ ಹಾರುವಂಥ ಮರ್ಕಟಕುಲದಲವತರಿಸಿ
ಶರಧಿ ಲಂಘಿಸುತ ದ್ವೀಪಾಂತರವಾಸಿ
ದುರುಳರನು ಸಂಹರಿಸಿ ದೊರೆ ಸುತರ ಸೇವಿಸಿ
ಕರದಿ ಎಂಜಲು ಕೊಂಡು ಮರವನೇರಿದನೆ 1
ಪ್ರಥಮ ಕುಲವನೆ ಬಿಟ್ಟು ದ್ವಿತೀಯ ಕುಲದೊಳಗುದಿಸಿ
ಹಿತವೆ ರಕ್ಕಸಿ ಸಂಗ ಪಥದಿ ನಿನಗೆ
ದಿತಿಜನಾಹುತಿ ಅನ್ನ ಗತಿಯಿಲ್ಲದಲೆ ತಿಂದು
ಚತುರ ಕುಲಜನ ನೀ ನುತಿಸಿ ಹಿಗ್ಗಿದನೆ 2
ತುಳುವಂಶಜನೆ ನೀ ಲಲನೆ ಸಂಗವ ತೊರೆದು
ಅಲೆದೆ ಯತಿಯಾಗಿ ಈ ಇಳೆ ಎಲ್ಲವ
ಕುಲನ್ಯೂನ ಗೋಪಾಲಕೃಷ್ಣವಿಠ್ಠಲನ ಪದವ
ಒಲಿಸಲೋಡಿದೆ ಆರು ಬರದಂಥ ಗಿರಿಗೆ 3
*****
No comments:
Post a Comment