ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ನೀ ಬರಿದೆಜನ್ಮ ವ್ಯರ್ಥಗಳೆವರೆ ಬಂಗಾರದಥಾ ಪ
ಮನವೇ ನೀ ಬರಿದೇ ಜನ್ಮ ವ್ಯರ್ಥಗಳೆವರೆ ಬಂಗಾರದಂಥಾ | ಮರೆವ ದಿನಗಳ ಜರಿವರೇ ನರದೇಹವಿದು ಅ.ಪ
ದೊರೆಯದಿನ್ನು ಮತ್ತ ತರುವರ ಏನಾದರೇನೀ | ಹರಿಯ ಸ್ಮರಣೆಯ ಬಿಡುವರೇ | ಅರಿವ ಪಂಥ ವಿಡಿದು ಜನ್ಮ ಮರಣ ಬಲಿಯಾ ತಪ್ಪಿಸದೇ | ತಿಗಳಿ ಹುಳುವಿನಂತೆ ಸಿಕ್ಕ ತನ್ನ ತಾ ಮರೆವರೇ 1
ಕೇಳೆಲೋ ನೀ ಪೊಡವಿಯೊಳಗಿದ್ದ ಸಾಯಸಾ | ಉದಯದಲೆದ್ದು ಬಿಡುವದೆ ಮಲಮೂತ್ರ ಕೆಲಸಾ | ಮಧ್ಯಾನ್ಹದಲಿ ವಡಲ ತುಂಬುವ ಕೆಲಸಾ | ನಿಶಿಕಾಲದಲ್ಲಿ ವಡನೆ ಮಲಗುವ ಕೆಲಸಾ | ಪಡೆದ ತಾಯಿಯವ್ವನೆಂಬ ದೃಢವನವಾ ಕಡಿಯಲು | ಕೊಡಲಿಯಂತೆ ಹುಟ್ಟಿ ಬಂದೆ ಮಡದಿ ಮಕ್ಕಳುದ್ದೇಶಾ 2
ಮನವೇ ನೀ ಹಿಂದಿನವ ಗುಣ ಜರಿದು ಸದ್ಭಾವ ಭಕು | ತಿಂದ ನಡುವಳಿ ಬಿರಿದು | ಸದ್ಗುರುವೀನ | ದ್ವಂದ್ವ ಪಾದಗಳ ವಿಡಿದು | ಅವರ ದಯ | ದಿಂದ ಗತಿ ಮುಕ್ತಿ ಪಡೆದು | ಇಂದು ಧನ್ಯನಾಗೆಲೋ ಮುಕುಂದ ನಾಮ ನೆನೆದು ನೀ | ತಂದೆ ಮಹಿಪತಿ ನಿಜನಂದನುಸುರಿದನು 3
***
No comments:
Post a Comment