ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯನಾ ಮನಿಯಾ ನಾಯಿ ನಾನು ಪ
ಗುರು ಗುರು ಎನುತಲಿ ಇರುವೆ ಬಾಗಿಲದೊಳು | ಗುರುವಿನೆಂಜಲ ನುಂಡು ಸುಖಿಸುವೆ ನಮ್ಮಯ್ಯನಾ 1
ಹರಿ ಶರಣರ ಕಂಡು ಗರುವಿಸಿ ಕೆಲಿಯೆನು | ದುರುಳರ ಬೆನ್ನಟ್ಟಿ ಹೋಗೆನಾ ನಮ್ಮಯ್ಯನಾ 2
ಒಡೆಯನ ಮುಂದೆ ಯನ್ನಾ ಒಡಲವ ತೋರುವೆ | ಬಿಡದೆ ಅಂಗಣದೊಳು ಹೊರಳುವೆ ನಮ್ಮಯ್ಯ ನಾ3
ಹರಿನಾಮದಿಂದ ಭೋಂಕರಿಸಿ ವದರುವೆ | ಬರಗುಡೆ ಹಮ್ಮ ಸ್ವಜಾತಿಯ ನಮ್ಮಯ್ಯ ನಾ 4
ತಂದೆ ಮಹಿಪತಿ ಸ್ವಾಮಿ ಬಂದು ಮೈಯ್ಯಾದಡವಿ | ನಿಂದು ತನ್ನ ಬಿರುದಕ ಹಾಕಿದ ನಮ್ಮಯ್ಯನ 5
****
No comments:
Post a Comment