ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ದೇವಿ ಇಂತು ಚಿಂತೆಯು ಯಾಕ| ಸುಲಭದಿ ತಂದು ತೋರುವೆ ನಿನ್ನರಸನಾ ಪ
ನಳಿನಗಳಲಿ ಅಪರಾಧವಾಯಿತೆಂದು| ಮುಳಿದು ಬಿಂಕದಿ ಅಳಿಮೊರೆದು ತಾನೆದ್ದು| ಕಲಸಾರುವೇನೇ ನಿನ್ನಯ ತನುಗುಪವ| ತೊಲಗಿಬಿಟ್ಟು ನಿಲ್ಲುವನೇನೇ ರಂಗಾ1
ಹಣ್ಣಾಗಿ ರಂಜಿಸತಿಹಾ ಚೂತದ ಫಲವನ್ನು| ತ್ಯಜಿಸಿ ಬಂದ ತಪ್ಪಾಯಿತೆಂದು| ಉಣಲೋಲ್ಲದೇ ಶುಕಬಿಟ್ಟು ಪೋಪದೇನೇ| ಪೊಂಬಣ್ಣಾಧರಸವಿಯಾ ಬಿಟ್ಟು ನಿಲ್ಲುವನೇ2
ಘನ್ನ ಚಿಂತೆಯಬಿಟ್ಟು ಹರುಷದಲಿರು ತಾಯೆ| ಇನ್ನು ನಾ ಪೋಗಿ ನಾನಾ ಪರಿಯಿಂದಾ| ನಿನ್ನ ಬಳಿಗೆ ಒಪ್ಪಂತೆ ಮಾಡುವೆನೆ ಸಂ| ಪನ್ನ ಕೀರುತಿ ಮಹಿಪತಿ ಸುತ ಪ್ರೀಯನಾ 3
***
No comments:
Post a Comment