Sunday, 7 November 2021

ಬಿಟ್ಟು ಬನ್ನಿರೊ ಸಂಸಾರದ್ಹಂಬಲ ಸೃಷ್ಟಿಪತಿಯ ankita hayavadana BITTU BANNIRO SAMSAARADHAMBALA SRUSHTIPATIYA

 



ಬಿಟ್ಟು ಬನ್ನಿರೊ ಸಂಸಾರದ್ಹಂಬಲ ಪ.


ಸೃಷ್ಟಿಪತಿಯ ಸೇರಿ ನೀವು ಸುಖಿಸಬನ್ನಿರೊ ಅ.ಪ.


ಹೆಂಡಿರುಮಕ್ಕಳು ಎಂಬೋ ಹಂಬಲ ಬೇಡಿರೊಕೊಂಡವರಲ್ಲ ಕೊಡುವರಲ್ಲ ಮುಂದಿನ ಗತಿಯನು 1


ಎಷ್ಟು ಮಾಡಿ ಗಳಿಸಿ ತಂದರು ಸಾಲದೆಂಬರೊನಷ್ಟಮಾಡಿ ಇವನ ಬದುಕು ಎಲ್ಲ ತಿಂಬರು 2


ನಡುಬೀದಿಯಲಿ ಇವನ ಎಳೆದು ಸೆಳೆವರೊಕಡೆಗಣ್ಣು ಕುಡಿಹುಬ್ಬು ನೋಟದಿಂದಲಿ 3


ಉಂಡು ಉಟ್ಟು ಗುಂಡಿನಂತೆ ಮನೆಯಲಿರುವರೊಚಂಡ ಯಮನದೂತರು ಬಂದು ಎಳೆದು ಒಯ್ವರೊ4


ಮುಟ್ಟಿ ಭಜಿಸಿರೊ ಹಯವದನನಂಘ್ರಿಯನೆಟ್ಟನೆ ಮುಕ್ತಿಮಾರ್ಗ ತೋರಿಕೊಡುವೆನೊ 5

***

ಬಿಡದೆ ಭಜಿಸಿ ಬೊಮ್ಮ ಮೃಡ ಮುಖ್ಯ ಸುರರಿಗೆಡೆಯನೆನಿಪ ಮುದ್ದು ಉಡುಪಿಯ ಕೃಷ್ಣನ ಪ.


ಪೊಡವಿಯೊಳಗೆ ತನ್ನ ಅಡಿಗಳ ಧೇನಿಪ-ರಡಿಗಡಿಗವರ ವಾಂಛಿತ ವÀಸ್ತುವಕಡೆದು ಕೊಡುವೆನೆಂದು ಕಡೆಗೋಲ ನೇಣನೆಪಿಡಿದಿಹ ಸಿರಿಯರಾ ದೃಢಕೆ ಮೆಚ್ಚಿದನ 1


ಹರಿಸರ್ವೋತ್ತಮನೆಂಬೊ ಪರಮಸಿದ್ಧಾಂತಕ್ಕೆ ಮ-ಚ್ಚರಿಸುವ ಕುಮತದ ಕುಜನರಭರದಿ ಬಂಧಿಸಿ ಬನ್ನಂಬಡಿದು ಶಿಕ್ಷಿಪೆನೆಂದುವರಪಾಶದಂಡಧಾರಿಯಾಗಿ ತೋರಿಪ್ಪನ 2


ಭಕ್ತವತ್ಸಲನೆಂಬೊ ಸುಲಭೋಕ್ತಿಯನು ಬಂದನಿಕರಕ್ಕೆ ಪೇಳಲು ದ್ವಾರಕಾಪುರಿಯಸುಖತೀರ್ಥಮುನಿಗೆ ಸುಖಕರನಾಗಿ ಬಂದಅಕುಟಿಲ ಕೃಷ್ಣ ಹಯವದನರಾಯನ 3

***


No comments:

Post a Comment