..
ಪರಮಪರುಷನೆ ಕೃಷ್ಣ ಕಣ್ತೆರದು ನೋಡೊ ಪ
ಶಿರಿ ಅರಸ ದಯಸಿಂಧು ಶ್ರಾವ್ಯಮಂಗಳ ಕೀರ್ತಿ ಅ.ಪ.
ದ್ವಿಜಗಮನ ವೃಜಿನಹರ ಭುಜಗತಲ್ಪನೆ ದೇವ
ಅಜತಾತ ಗಜವರದ ಕುಜ ನಿವಾರಣನೆ
ಭಜನೆ ಪಾಲಿಸು ಎನ್ನ ವಿಮಲ ಮನದಲಿ ನಿಂತು
ಋಜು ಪುಂಗವರ ದೈವ ನಿರ್ಜರರ ಬಾಂಧವನೆ 1
ಒದ್ದವಗೆ ಶಿಕ್ಷಿಸದೆ ಬೈದವಗೆ ಗತಿ ಇತ್ತೆ
ನಿರ್ದೋಷ ಗುಣಪೂರ್ಣನೆಂದು ಶ್ರುತಿ ಸಾರುತಿದೆ
ನಿದ್ದೆ ಮಾಡುವಗೊಲಿದಿ ಮುಕ್ತಿಯನಿತ್ತೆ
ಯುದ್ಧದಲಿ ಶರದಿಂದ ಹೊಡೆದವಗೆ ನೀನೊಲಿದೆ 2
ಶುದ್ಧ ಆನಂದಾಬ್ಧಿ ಜಯೇಶವಿಠಲನೆ
ಮಧ್ವ ಮುನಿದೈವ ಸಿದ್ಧರೊಡೆಯ
ಉದ್ಧವನ ಗುರು ಸುಧಾಮ ಮಿತ್ರನೆ ಮನ
ತಿದ್ದಯ್ಯ e್ಞÁನ ನಿನ್ನಲ್ಲಿ ನಿಲುವಂತೆ 3
***
No comments:
Post a Comment