..
ಭವ ಸಿಂಧು ಶೋಷಿಪೇಕ್ಷಣ ಕಲ್ಯಾಣಗಾತ್ರ ಪ
ಪವಮಾನ ಪ್ರಿಯ ಪುತ್ರ ಕಾರುಣ್ಯನೇತ್ರ ಅ.ಪ.
ನಿರವದ್ಯ ಭೂದೇವ ನಿರುತ ಸುಖಭರಿತ ಭಾವ
ಶರಣ ಜನರನು ಕಾವ ಶಪಥ ಭಾವ
ಹರಿಗುರು ಪರ ಸೇವಾ ನಿರುತ ಮಂಗಳ ಭಾವ
ಶರಣು ಶ್ರೀ ರಾಮಾರ್ಯ ಪರಮ ಸಂಜೀವ 1
ತನುಮನವ ಹರಿಗಿತ್ತ ಗುಣನಿಧಿ ಮಹಗುಪ್ತ
ಅಣುಘನದಿ ಹರಿದೀಪ್ತ ತನುನೋಳ್ಪ ಶಕ್ತ
ಘನ ಕೃಷ್ಣವರ್ಯಾಪ್ತ ಮನೋವಾಕ್ಕಾಯಸ್ತ
ಗುಣಾಪೂರ್ಣಾ ಹರಿಕೃತ್ಯವನು ಎಣಿಪ ತೃಪ್ತ 2
ಬಲುಭಕ್ತಿ ಭಾರನತ ಬಲಿತ ವಿe್ಞÁನರತ
ಲಲಿತ ಮಂಗಳಚರಿತ ನಲಿವನು ಪ್ರೀತ ಕ-
ಮಲಾ ಅಪಹರ್ತ ಕಲ್ಯಾಣ ಸಂಭರಿತ
ಪುಲ್ಲಾಕ್ಷ ಮಮನಾಥ ಕೃಷ್ಣಾಂಘ್ರಿದೂತ 3
ಪರಮ ಸೌಭಗ ಪೂಜ ಪರಭಕ್ತಿ ನಿವ್ರ್ಯಾಜ
ಚರಿಸಿ ಶ್ರೀ ಗುರುರಾಜ ವರಕಲ್ಪಭೂಜ
ಸರುವ ತತ್ವಗಳೋಜ ವಶಗೊಂಡ ಮಹರಾಜ
ಸರುವ ಸಿದ್ಧಿಗೆ ದೊರಿ ಎನಿಪ ವಿರಜ 4
ಸಂತಾಪಹರ ಶಾಂತ ಸೌಭಾಗ್ಯಕರವಂತ
ಸ್ವಾಂತದಲಿ ನಿಶ್ಚಿಂತ ಸರಸಿ ಶ್ರೀಮಂತ
ಧ್ವಾಂತ ಹರ ಶ್ರೀ ಜಯೇಶವಿಠಲನ ಏಕಾಂತ
ಪಂಥ ಬಿಡದಿರುವಂಥ ಪೂರ್ಣ ಜಯವಂತ 5
***
No comments:
Post a Comment