ದಣಿಯ ನೋಡಿದೆನೊ ನಿನ್ನ ವೆಂಕಟರನ್ನಾ
ದಣಿಯಾ ನೋಡಿದೆ ನಿನ್ನಾ ಪ.
ಋಜಗಣದೊಡೆಯನೆ ಬಿಡುವಿಲ್ಲದೆ ನಿನ್ನ ಅಡಿಗಳಿಗೆ ವಂದಿಪೆ ಅ.ಪ.
ಮಹದ್ವಾರ ಬಾಗಿಲಾದಲ್ಲಿ ಇರುತಿರುವೋರು
ಜಯವಿಜಯರಿಲ್ಲಿ ವಾರವಾರಕ್ಕೆ ನಿನ್ನ
ಬ್ರಹ್ಮಾದಿ ದ್ವಿಜರು ಹಾರೈಸಿ
ಹರುಷದಿ ಪೂಜೆಗೊಂಬೊರೆ 1
ಯಡಬಲದಲ್ಲಿ ನಿನ್ನ ಮಡದಿಯರಿಂದ ಒಡಗೂಡಿ
ಸಡಗರದಲ್ಲಿ ಇಂದಿರೇಶ
ಗರುಡವಾಹನೆ ರಂಗಾ ಉರಗಾದ್ರಿನಿವಾಸ
ಶೇಷಾಚಲವಾಸ ಶ್ರೀ ವೆಂಕಟೇಶಾ 2
ಸೃಷ್ಟ್ಯಾದಷ್ಟ ಕರ್ತಾ
ಶ್ರೀವಿಠಲ ನಿನ್ನಾ ಗುಣಯೆಷ್ಟೆಂದು ವರ್ಣಿಪೆನಾ
ಅಷ್ಟ ಮಹಿಷಿಯರ ಆಳದ ಮದವೆಷ್ಟೊ
ಕಾಳಿಮರ್ದನಕೃಷ್ಣ ಬಲು ಜೋರಾ ದಿಟ್ಟಾ ಆನಂದ ಕೊಟ್ಟಾ3
***
No comments:
Post a Comment