..
kruti by Nidaguruki Jeevubai
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ
ಘನ್ನವಾದ ಪಾಪವನ್ನು ಮಾಡಿ ಜಗದಿ
ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ
e್ಞÁನ ಶೂನ್ಯವಾಗಿ ನಾನಾ ವಿಷಯಗಳಲಿ
ನಾನು ನನ್ನದೆಂಬ ಹೀನ ಮಮತೆಯಿಂದ
ದಾನವಾರಿ ನಿನ್ನ ಧ್ಯಾನಿಸದಲೆ ಕಾಲ
ಸಾನುರಾಗದಿಂದ ಶ್ವಾನನಂತೆ ಕಳೆದೆ 1
ರೋಗಹರನೆ ಭವದ ರೋಗವೈದ್ಯನೆಂದು
ಬಾಗಿ ನಿನ್ನನುತಿಪೆ ನಾಗಾರಿವಾಹನ
ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ
ಭಾಗವತರ ಸಂಗ ದೇವ ಪಾಲಿಸಯ್ಯ 2
ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ
ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ
ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ-
ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3
ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ
ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ
ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ
ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4
ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ
ಕಮಲಸಂಭವ ಜನಕ ಕಮನೀಯ ಸ್ವರೂಪ
ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ-
ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
***
No comments:
Post a Comment