..
kruti by Nidaguruki Jeevubai
ಜಯ ಲಕ್ಷ್ಮಿ ಬಾ ಹಸೆಗೆ
ಜಯ ಜಯ ಜಗನ್ಮಾತೆ ತ್ರೈಲೋಕವಿಖ್ಯಾತೆ ಪ
ಮುತ್ತಿನ ಮಂಟಪದಿ ರತ್ನಪೀಠವಿರಿಸಿ
ಮುತ್ತೈದೆಯರು ನಿನ್ನ ಅರ್ಥಿಯಲಿ ಕರೆವರು ಅ.ಪ
ಗೆಜ್ಜೆ ಸರಪಣಿ ಕಾಲಗೆಜ್ಜೆ ನಾದದಿಂದ
ಹೆಜ್ಜೆನಿಡುತ ಬಾ ಬಾ ಸಜ್ಜನರಕ್ಷಕಳೆ1
ಅಚ್ಚ ಜರಿ ಪೀತಾಂಬರ ಹೆಚ್ಚಿನಾಭರಣಗಳು
ಮಿತ್ರೇರಲಂಕರಿಸುವರು ಅಚ್ಚುತನೊಡಗೊಡಿ 2
ಮುತ್ತಿನ್ಹಾರ ಪದಕ ಜತ್ತಿಲೊಲಿಯುತಿಹುದು
ಹಸ್ತ ಕಡಗ ದೋರ್ಯ ಸಿಸ್ತಿನ ಸುಂದರಿಯೆ 3
ಕರ್ತೃ ಕಮಲನಾಭ ವಿಠ್ಠಲನರಸಿಯೆ
ಹಸ್ತಿಗಮನೆ ಬಾ ಬಾ ಉತ್ತಮ ಪೀಠಕೆ 4
***
No comments:
Post a Comment