Thursday, 5 August 2021

ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ankita kamalanabha vittala

 ..

kruti by Nidaguruki Jeevubai

ಕರೆ ಕರೆ ಭವದೊಳು ಮುಳುಗಿರುವೆ
ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ

ಅಗಣಿತ ಮಹಿಮನೆ ಸುಗುಣಗಳನುದಿನ
ಬಗೆ ಬಗೆ ಸ್ಮರಿಸುವ ಬಗೆ ಮರೆದು
ಹಗಲಿರುಳೆನ್ನದೆ ನಿಗಮವೇದ್ಯನ ನಾಮ
ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1

ಜನುಮ ಜನುಮದಲಿ ಜನಿಸಿ ಬರುವ ದು:ಖ
ಕೊನೆಗಾಣದಾಗಿದೆ ಕರುಣಾನಿಧೆ
ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ
ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2

ನಾನು ನನ್ನದು ಎಂಬ ಹೀನವೃತ್ತಿಗಳಿಂದ
ಹಾನಿಯಾಯಿತು ಆಯು ಶ್ರೀನಿಧಿಯೆ
e್ಞÁನಿಗಳೊಡನಾಡಿ ಮೌನದಿಂದಿರದಲೆ
ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3

ರಂಗನ ಮೂರ್ತಿಯ ಕಂಗಳಿಂದಲಿ ನೋಡಿ
ಭಂಗಗಳಳಿಯುವ ಹರಿದಾಸರ
ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು-
ರಂಗನೆ ಈ ಭವ ಭಂಗ ಬಿಡಿಸೆನ್ನದೆ4

ಇಂದಿರೇಶನ ಪಾದ ಪೊಂದಿ ಭವದಘ
ವೃಂದವ ಕಳೆಯುವನೆಂದೆನ್ನುತ
ಬಂಧಕ ಮೋಚಕನೆಂದರಿಯದೆ ಭವ
ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5

ಯಾತಕೀ ಪರಿ ಮೋಹ ಮಾತುಳಾಂತಕ ಕೃಷ್ಣ
ಮಾತು ಮಾತಿಗೆ ಹರಿ ಹರಿ ಎನ್ನದೆ
ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ
ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6

ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ
ಕಮಲನಾಭ ವಿಠ್ಠಲ ವಿಠ್ಠಲ ಹರೇ
ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
***

No comments:

Post a Comment