Monday, 2 August 2021

ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ ankita karpara narahari akshobhya teertha stutih

ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ

ಕಾಮಿತ ಪ್ರದವಹುದು ಶೃಣ್ವತಾಂ ಸತತಂ ಪ


ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀ

ರಾಮನಂಘ್ರಿದ್ವಯವ ಪೂಜಿಸುತಲಿ

ಭೂಮಿ ನಿರ್ಜರ ಜನಸ್ತೋಮ ವಂದಿತರಾಗಿ

ವ್ಯೋಮ ಕೇಶಾಂಶರೆಂದೆನಿಸಿ ಮೆರೆವಂಥ 1


ಮೋದತೀರ್ಥರ ಮತ ಮಹೋದಧಿಗೆ ಪೂರ್ಣಹಿಮ

ದೀದಿತಿಯರೆಂದೆನಿಸಿ ದಿಗ್ವಲಯದಿ

ಭೇದ ಬೋಧಕ ಸೂತ್ರವಾದದಿಂದಲಿ ಮಹಾ

ವಾದಿ ವಿದ್ಯಾರಣ್ಯ ಯತಿವರನ ಜಯಿಸಿದ 2


ವಿಟ್ಠಲನ ಪದಪದುಮ ಷಟ್ಟದರೆಂದೆನಿಸಿ

ಸ್ವಪ್ನಸೂಚಿತ ಚಂದ್ರಭಾಗತಟದಿ

ಶ್ರೇಷ್ಠ ಕುದುರೆಯನೇರಿ ನದಿಯ ಜಲಕುಡಿದವರ

ಇಷ್ಟರೆನ್ನುತ ಕರೆದು ಕೊಟ್ಟರಾಶ್ರಮವ 3


ಸೃಷ್ಟಿಯೊಳು ಮಧ್ವಮತ ಪುಷ್ಠಿಗೈಸುವರೆಂಬ

ದೃಷ್ಟಿಯಿಂದಿವರಿಗೆ ಸುಮುಹೂರ್ತದಿ

ಪಟ್ಟಗಟ್ಟಿದರು ಜಯತೀರ್ಥ ನಾಮವನಿಡುತ

ಕೊಟ್ಟರಾಜ್ಞೆಯನು ದಿಗ್ವಿಜಯ ಮಾಡಿರಿ ಎಂದು 4


ದೇಶದೇಶದಿ ಬರುವ ಭೂಸುರೋತ್ತಮರ ಅಭಿ

ಲಾಷೆಗಳನೆಲ್ಲ ಪೂರೈಸಿ ಪೊರೆವ

ಶ್ರೀಶಕಾರ್ಪರ ಕ್ಷೇತ್ರವಾಸ ಅಶ್ವತ್ಥನರ

ಕೇಸರಿಯ ನೊಲಿಸಿದ ಯತೀಶರಿವರೆಂದು 5

****


No comments:

Post a Comment