Monday, 2 August 2021

ಯಾತಕೆ ಮರೆತೆನ್ನ ಯತಿಕುಲ ತಿಲಕನೆ ankita krishnavittala

ಯಾತಕೆ ಮರೆತೆನ್ನ ಯತಿಕುಲ ತಿಲಕನೆ

ಪ್ರೀತಿಯ ಬಯಸುತ ಬಂದೆ ಪ


ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ

ವಾತಪಿತನಡಿ ಮತಿಯ ಪ್ರೇರಿಸೋ

ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ.


ದೇಶದೇಶದಿ ಬರುವ ದಾಸಜನರÀಘ

ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ

ಶೇಷಶಯನನ ದೋಷ e್ಞÁನ ವಿಶೇಷದಿಂದಲಿ ನ್ಯಾಸಮಾಡಿದೆ

ದಾಸನೆನ್ನಯ ದೋಷ ಕಳೆಯುತ ಬೀಸು ದೃಷ್ಟಿಯ

ಭೂಸುರೋತ್ತಮ 1

ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ

ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ

ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ

ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2

ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ

ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ

ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ

ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3

ದಾತ ಈತನೆಂಬ ಖ್ಯಾತಿ ಬಿರುದು ನಿನಗೆ

ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ

ನಾಥ ಜಯಮುನಿ ಪ್ರೀತಿಯ ಪಡೆಯುತ ಗೀತೆ

ಬೋಧೆಯ ನೀತಿ ಪೇಳಿದೆ

ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4

ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ

ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ

ಚಾರು ಮಂಗಳಚರಿತ ನರಹರಿ ಭಾರಿಸೇವಿಪ ಸೂರಿ ಶೇಖರ

ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5

ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ

ನೂಕಿ ದುರಿತರಾಶಿ ಸಾಕುಹರಿಯ ತೋರಿ

ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ

ಏಕಮನಸಿಲಿ ಧ್ಯಾನಿಪ ಧೊರೆ ನಾಕ ಋಷಿಗತಿಪ್ರಿಯ ಶಿಷ್ಯನೆ 6

ಪಾಹಿ e್ಞÁನದ ಖಣಿಯೆ ಪಾಹಿ ಭಕ್ತರ ನಿಧಿಯೆ

ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ

ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ

ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7

***


No comments:

Post a Comment