ನಾ ನಿನ್ನ ಮರೆತರೆ ನೀ ಯನ್ನ ಮರೆವರೆ
ದೀನ ವತ್ಸಲ ರಂಗ ದಾನವಾಂತಕ ಕೃಷ್ಣ ಪ
e್ಞÁನಗಮ್ಯನೆ ನಿನ್ನ ಧ್ಯಾನ ದೊಳಿಟ್ಟೆನ್ನ
ಮಾನದಿಂದಲಿ ಕಾಯೋ ಶ್ರೀನಿವಾಸ ಪ್ರಭುವೆ ಅ.ಪ.
ದಿನಕರನ ಜನರು ನೆನೆಯದೆ ಬಿಟ್ಟರೆÉ
ಜನರನ್ನು ಬೆಳಗದೆ ದಿನಕರ ಬಿಡುವನೆ
ಹೀನವಿಷಯದಿ ಮುಳುಗಿ ತೇಲುವ ಎನ್ನ
ನೀನಾಗಿ ಪೊರೆದರೆ ಘನತೆಯಲ್ಲವೆ ದೇವಾ 1
ಪೆತ್ತ ಮಕ್ಕಳು ಬಲು ಕತ್ತೆಗಳಾದರು
ಹೆತ್ತ ತಾಯಿಯು ತಾನು ಎತ್ತದೆ ಬಿಡುವಳೆ
ಮತ್ತನಾನಾದರು ಉತ್ತಮೋತ್ತಮಸ್ವಾಮಿ
ವಾತ್ಸಲ್ಯತೋರಯ್ಯ ಹಸ್ತಿವರದ ಧೊರೆಯೇ 2
ಗೋವತ್ಸಹಾಲಿಗೆ ಗೋವಿನಗುದ್ದಲು
ತವಕದಿ ಉಣಿಸದೆ ಗೋವು ಬಿಡುವುದೇ
ತವಪಾದ ಕಮಲದಿ ಅವಿನೀತನಾದರೆ
ಸುವಿವೇಕ e್ಞÁನವ ಈಯದಿರುವರೇನೋ 3
ಕರಿ ಧೃವ ಭಕ್ತರ ಪೊರೆಯಲಿಲ್ಲವೆ ನೀನು
ಘೋರಪಾಪಗಳ ತರಿದೆ ಅಜಾಮಿಳಗೇ
ವರವಿತ್ತು ವ್ಯಾಧಗೆ ವರಕವಿಯೆನಿಸಿದೇ
ಭಾರವೆ ನಾನಿನಗೆ ಕರುಣಾಸಾಗರ ರಂಗ 4
ಜಯಮುನಿ ಅಂತರ ವಾಯುವಿನೊಳಗಿಪ್ಪ
ರಾಯ ಶ್ರೀಕೃಷ್ಣವಿಠಲನೆ ನಂಬಿದೆ
ಕಾಯವಚ ಮನದಿ ಜೀಯನೆ ಗತಿಯೆಂಬೆ
ನೋಯಿಸದೆ ಭವದಿ ದಯಮಾಡಿ ಸಲಹಯ್ಯ 5
****
No comments:
Post a Comment