ಸುಖವೇ ನೆಂಬುದನು ಇಂದು ಕಂಡೇ ಪ
ವಿಖನಸಾರ್ಚಿತ ಪಾದ ಭಜನೆ ಮಾಡುವದೊಂದೆ ಅ.ಪ.
ಪುಟ್ಟಿದಾರಾಭ್ಯ ಬಹುದಿಟ್ಟನಾಗಿಯೆ ಬಾಳು
ಅಟ್ಟಿಮೆರೆಯುವ ಬಯಕೆ ವಿಟ್ಟು ಮನದಲಿ ಬಹಳ
ಕಷ್ಟಪಟ್ಟೆನು ಘಳಿಸೆ ವಿತ್ತರಾಶಿಯ ವಿಪ್ರ
ಶ್ರೇಷ್ಟಧರ್ಮವ ಬಿಟ್ಟು ವ್ಯರ್ಥ ವಿದ್ಯೆಯ ನೋದಿನೋದಿ
ಅಷ್ಟಕರ್ತನು ಬಯಕೆ ಬಟ್ಟಬಯಲನು ಗೈದು
ಕೊಟ್ಟು e್ಞÁನದ ಕಣ್ಣು ನೆಟ್ಟನೆ ನೊಡೆನಲು
ಬಟ್ಟು ಸುಖವನೆ ಮೆಲ್ವ ಜಟ್ಟಿ ಜಗದಲಿ ಕಾಣೆ
ಬೆಟ್ಟ ಸಮ ಕಷ್ಟವಿದೆ ಎಳ್ಳಷ್ಟು ಭವ ಸುಖಕೆ 1
ಹೆಂಡತಿಯ ಸುಖವೆಂದೆ ಕೆಂಡಬಡತನ ಸೋಕೆ
ಗಂಡು ಬಯಕೆಗಳೆಲ್ಲ ಉಂಡುದಣಿಯಲಿಲ್ಲ
ಭಂಡ ಬಾಳಿದು ಎಂದು ಮಂಡೆ ಚಚ್ಚುತ ನಿತ್ಯ
ತುಂಡು ಆದಳು ಅವಳು ಬೆಂಡು ಆದೆನುನಾನು
ಹಿಂಡು ಬಳಗಗಳೆಲ್ಲ ಉಂಡು ದಣಿದರು ನಗೆಯ
ಹಿಂಡಿ ಪರಜನ ಪ್ರಾಣ ಉಂಡು ಬದುಕಿಹೆ ಸ್ವಾಮಿ
ಮುಂಡೆ ಗಿಂತಲು ಹೀನ ಷಂಡನಾಗಿಹೆ ಸ್ವಾಮಿ
ಪಾಂಡುರಂಗನೆ ನಿನ್ನ ತೊಂಡನಾದರೆ ಧನ್ಯ 2
ನೆಂಟರೆಲ್ಲರು ವಿತ್ತ ಅಂಟಿರಲು ಅಂಟುವರು
ಗಂಟು ಇಲ್ಲದಮೇಲೆ ಗಂಟುಮೋರೆಯ ನೇಮ
ಒಂಟಿಗನೆ ಜೀವನಿಹ ನೆಂಟ ಬಿಂಬನೆ ಒಬ್ಬ
ಭಂಟನೆಂದರೆ ಪಿಡಿವ ಶುಂಠ ಬಿಟ್ಟವ ಸತ್ಯ
ಕಂಟಕವು ವಿಷಯತತಿ ಕಜ್ಜಿತಿನಸಿನ ತೆರದಿ
ಎಷ್ಟು ಸೇವಿಸಲಷ್ಟು ತಂಟೆನೀಡುವವೇನೆ
ಕುಂಠವಾದರು ಕರುಣ ಅಂಟಿಮನಸಿಗೆ ಭಾಧೆ
ಉಂಟುಮಾಡುವವು ವೈಕುಂಠ ನಾಯಕಕಾಯೊ 3
ಬಾಡಿಗೆಯ ಮನೆಯಂತೆ ಗಾತ್ರವಿದು ಜೀವನಿಗೆ
ಹೂಡಿಹನು ಭವಯಾತ್ರೆ ಓಡಿಹೊಹುದು ತಾನೆ
ಆಗಿ ಮುಗಿಯಲು ಆಟ ಪ್ರೌಡ ಹರಿಪುರ ದಾರಿ
ನೋಡಿಕೊಂಡವ ಜಾಣ ಕೇಡು ಮತ್ತಗೆ ಸಿದ್ಧ
ಮಾಡುತಲಿ ವಿಧಿಗಳನು ದೂಡುತಲಿನಿಜೀವ
ಕೂಡುತಲಿ ಸಜ್ಜನರ ಹಾಡುತಲಿ ಹರಿಗಾನ
ಜೋಡಿಸುತ ಹರಿಭಕ್ತಿ ಬೇಡದಲೆ ಏನೊಂದು
ಬಾಡದಿರೆ ದುಃಖ ಬರೆ ನೋಡುವನು ನಿಜ ಸುಖವ 4
ಹೆಂಡತಿಯು ಸುಗುಣಿ ಇರೆ ಗಂಡನಿಹ ದುರ್ಮಾರ್ಗ
ಗಂಡ ಮೃದು ತರವೆನ್ನೆ ಹೆಂಡತಿಯು ಕರ್ಕಸಿಯು
ಕುಂಡಲಿಯ ಸಿರಿಯೆನ್ನೆ ಮಂಡೆಯಲಿ ಮೆದುಳಿಲ್ಲ
ಹೆಂಡ ಕುಡುಕರು ಸುತರು ಉಂಡುಸುಖಿಸೆ ರೋಗ
ಮುಂಡೆಯರ ಚಲುವಿಕೆಯು ಶಂಡಸಹ ಸಂಸಾರ
ಭಂಡ ಮಕ್ಕಳ ಬಾಳು ಪುಂಡಜನ ಸಹವಾಸ
ಕಂಡು ಸಹಿಸದ ನೆಂಟ ಉಂಡು ದೂರುವ ಬಳಗ
ದಂಡವಲ್ಲವೆ ಮತ್ತೆ ಕೊಂಡು ಮಾಡುವದೇನು 5
ಹೇಸಿ ಭವ ನಿಜಗುಣವೆ ಕ್ಲೇಶದಾಯಕ ವಿರಲು
ಲೇಸು ದೊರಕುವದುಂಟೇ ಏಸು ಕಾಲವು ಕಳಿಯೆ
ಏಸು ಕಡಿಯಲು ನೀರ ಸೂಸುವುದೆ ನವನೀತ
ಹೇಸಿಗೆಯ ದುರ್ಗಂಧ ನಾಶವಾಗುವುದುಂಟೇ
ಆಶೆ ವಿಷಯದಿ ಬಿಡದೆ ಕ್ಲೇಶ ತೊಲಗದು ಎಂದು
ದಾಶರಥಿಯ ಮನಮುಟ್ಟಿ ದಾಸ ನಾಗದ ತನಕ
ಭಾಸವಾಗದು e್ಞÁನ ಶ್ರೀಶ ಕಾಣಿಸ ತನ್ನ
ದೋಷಿಯಾಗದೆ ಹರಿಗೆ ಮೀಸಲೆನ್ನಿರಿ ಎಲ್ಲ 6
ನಂಬಿ ಮತಿಮತ ತತ್ವ ವಿಷಯ ಹಂಬಲವಳಿದು
ಡಿಂಬಗತ ಹರಿ ಬಿಂಬ ಧ್ಯಾನ ಮಾರ್ಗವ ಕಂಡು
ಅಂಬುಜಾಕ್ಷ ನಮ್ಮ “ಶ್ರೀ ಕೃಷ್ಣವಿಠಲ”ನ್ನ
ತುಂಬಿ ಹೃದಯದದಿ ಸತತ ಪರಮ ಸಂಭ್ರಮದಿಂದ
ತಂಬೂರಿ ಮೀಟುತ್ತ ಗೆಜ್ಜೆ ಸಹ ಕುಣಿಕುಣಿದು
ಅಂಬಕದಿ ಸುಖ ಬಾಷ್ಪ ಸುರಿಸುತ್ತಹರಿನೆನೆದು
ಅಂಬುಜಾಸನ ಸುರಕದಂಬ ಕರುಣವ ಗಳಿಸಿ
ಅಂಬೆ ಸಿರಿಪತಿ ಚರಣದಿಂಬು ಬೇಡುವದೊಂದೇ 7
****
No comments:
Post a Comment