Sunday, 1 August 2021

ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ ankita lakshmikanta

 ..


kruti by ಲಕ್ಷ್ಮೀನಾರಯಣರಾಯರು Lakshminarayanaru 


ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ

ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ


ಒಡಲಿಗೋಸುಗ ಪರರಡಿಗಳ ಪಿಡಿಯುತೆ

ಕಡು ನೊಂದೆನೊ ಭವ ಕಡಲಿನೊಳಗೆ ಅ.ಪ.


ಪಡೆದು ವರಗಳನು ಕಡು ಖೂಳ ರಾವಣ

ನಡುಗಿಸಿ ಸುರನರ ಭುಜಗರೊಡೆಯರನ್ನು

ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ -

ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ

ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು

ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು

ಪೊಡಮಟ್ಟು ಬೇಡಲು ಕೊಡುತೆ ಅಭಯವನು

ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1


ದಶರಥ ನೃಪ ಸತಿ ಕೌಸಲ್ಯದೇವಿಯ

ಬಸುರೊಳು ಸಂಜನಿಸಿ ದಶದಿಶದೊಳು ಯಶ

ಪಸರಿಸಿ ಅಸುರೆಯ ಅಸುವನು ಹಾರಿಸಿ

ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ

ನಸುನಗುತಲಿ ಪದಸರಸಿಜ ಸೋಕಿಸಿ

ಅಶಮವಾಗಿದ್ದ ಮುನಿಸತಿಯನುದ್ಧರಿಸಿ

ಪಶುಪತಿ ಧನುಭಂಗವೆಸಗಿ ಸೀತೆಯ ಕರ

ಬಿಸಜವ ನೊಶಗೈದ ಅಸಮ ಸಮರ್ಥ 2


ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ

ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು

ಬಂದ ಕಾರ್ಯಕೆ ನೆವ ತಂದು ವನಕೆ ಬಂದು

ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು

ನೊಂದು ನೃಪನು ದಿನವನ್ನು ಹೊಂದಲು ಕರೆ-

ತಂದು ಭರತನಿಗೆ ಅಂದು ರಾಜ್ಯವನೀಯೆ

ಬಂದೊಲ್ಲದೆ ಬೇಗ ಬಂದು ವಂದಿಸೆ ಪದ

ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3


ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ

ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ

ಯುಕ್ತನು ನೀನಾಗಿ ಪೊರೆಯಲು

ಇತ್ತು ಅಭಯವನ್ನು ಉತ್ತಮ ದಂಡಕದಿ

ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು

ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ

ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ

ತುತ್ತು ಮೂರಾಗಿಸಿದತ್ಯಂತ ಶಕ್ತ 4


ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ

ತಾ ತೆರಳಲು ಕಂಡು ಪಾತಕಿ ದಶಮುಖ

ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು

ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ

ಆತಗೆ ಸದ್ಗತಿಯಿತ್ತು ನಡೆದು ಖಳ

ಪೋತಕ ಬಂಧನ ತೋಳ್ಗಳ ಖಂಡಿಸಿ

ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ

ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5


ಚರಣದಿಂದೊಗೆದು ದುಂದುಭಿಯ ಶರೀರವನ್ನು

ತರುಗಳೇಳನು ಒಂದೇ ಸರಳಿನಿಂದುರುಳಿಸಿ

ತರಣಿಸುತನ ಭಯ ಹರಿಸಿ ವಾಲಿಯ ಗರ್ವ

ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ

ಅರಸಿಯನರಸಲು ಸರ್ವದೆಸೆಗೆ ಆ

ತರುಚರ ತತಿಗಳ ಕೆರಳಿಸಿ ಹರುಷದಿ

ಪರನು ಭಕುತನನ್ನು ಕರೆದು ಕುರುಹುಗಳ

ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6


ತಿಂಗಳು ಮೀರಿತೆಂದು ಅಂಗದ ಪ್ರಮುಖರು

ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ -

ರಂಗಿಣಿ ಪತಿಯನ್ನು ಲಂಘಿಸಿ ಹನುಮನು

ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು

ಭಂಗಿಸಿ ಲಂಕಿಣಿಯನು ಸೀತಾಂಗನೆ -

ಗುಂಗುರವಿತ್ತುತ್ತಮಾಂಗದ ಮಣಿಯಾಂತು

ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ

ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7


ಹರಿವರರನು ಕೂಡಿ ಶರಧಿಗೆ ಪಯಣಮಾಡಿ

ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ

ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ

ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ

ಪುರಕೆ ಉರಿಯನಿಕ್ಕಿ ಶರವರ್ಷಂಗಳ

ಕರೆದು ಕರಿ ರಥಾ ತುರಗ ಪದಾತಿಗ-

ಳುರುಳಿಸಿ ದಶಶಿರನುರವನು ಇರಿದು

ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8


ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು

ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ

ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ

ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ

ಭಕ್ತನ ಕಳುಹಿ ಸದ್ವøತ್ತವ ಭರತಗೆ

ಬಿತ್ತರಿಸಿ ಮಹದುತ್ಸವದಿ ಪುರ

ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ

ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9

***


No comments:

Post a Comment