..
ಎಷ್ಟು ಪ್ರೇಮಿಯೋ ಗುರುವು ಎಷ್ಟು ಪ್ರೇಮಿಯೋ ಪ
ಎಷ್ಟು ಪ್ರೇಮಿ ಎನ್ನ ಬಿಡದೆ | ಸೃಷ್ಟಿಯಲ್ಲಿ ಕೈಯಪಿಡಿದ ಅ.ಪ
ಭಾನುಕೋಟಿ ತೇಜ ವರದ ಸಾನುರಾಗದಿಂದ ಕರೆದು
ಜ್ಞಾನ ಶಾಸ್ತ್ರ ಬೋಧಿಸುತ್ತ ಹೀನ ವೃತ್ತಿ ದೂರಿ ಪೊರೆದ 1
ನೀಲವರ್ಣ ಕಂಜನಯನ ನೀಲಕಂಠಮಿತ್ರ ಭಕ್ತ
ಪಾಲ ಭೂರಿದುಃಖಭವವ ಧೂಳಿಮಾಡಿ ಬಾಲಗೊಲಿದ 2
ಶ್ರೇಷ್ಠ ಸುಮಹದೇವಪುರದೊಳಿಷ್ಟರಂಗನಾಥ ಭರದಿ
ಮುಟ್ಟಿ ಮುಕ್ತಿಯಿತ್ತು ಪುನಃ ಹುಟ್ಟು ಸಾವುಗಳನು ಕಳದ 3
***
No comments:
Post a Comment