ಕೋಲು ಕೋಲೆನ್ನಕೋಲೆ ಕೋಲು ಕೋಲೆನ್ನಕೋಲೆ ಸದ್ವಸ್ತುವಿನ ಬಲಗೊಂಬೆಕೋಲೆ ಪ
ಕೋಲುನಿಕ್ಕುತ ಬನ್ನಿ ಬಾಲೇರೆಲ್ಲರು ಕೂಡಿ ಮ್ಯಾಲ್ಯೆ ಮಂದಿರದ ಹಾದೀಲಿ ಕೋಲೆ ಮ್ಯಾಲೆ ಮಂದಿರದೊಳು ಬಾಲಮುಕುಂದತಾನು ಲೋಲ್ಯಾಡುತ ಒಳಗಿದ್ದಾನೆ ಕೋಲೆ 1
ಆದಿಗಿಂತಲ್ಯದೆ ಹಾದಿ ಅನಾದಿಯು ಸಾಧಿಸ ಬನ್ನಿ ಒದಗಿನ್ನು ಕೋಲೆ ಸಾಧಿಸಿ ಬರಲಿಕ್ಕೆ ಸಾಧ್ಯವಾಗುತಲ್ಯಾದೆ ಭೇದಿಸಿ ನೋಡಿ ಮನದಲಿ ಕೋಲೆ 2
ಕಣ್ಣಿನೊಳಿಹ್ಯ ಬೊಂಬೆಕಾಣಬರುತ್ತದೆ ಜಾಣ್ಯೇರು ನೀವು ತಿಳಕೊಳ್ಳಿಕೋಲೆ ಜಾಣ್ಯೇರು ನೀವು ಕಾಣದೆ ಹೋಗಬ್ಯಾಡಿ ಜಾಣ್ರಿಸುತ್ಹಾನೆ ಸದ್ಗುರು ಕೋಲೆ 3
ಸದ್ಗುರುಪಾದಕೆ ಸದ್ಭಾವವಿಟ್ಟು ನೀವು ಸದ್ಭೋಧ ಕೇಳಿ ಸಾಧಿಸಿ ಕೋಲೆ ಸಾಧಿಸಿ ಕೇಳಿ ನೀವು ಬುಧಜನರೊಡಗೂಡಿ ಚದುರತನದಲಿ ಅತಿ ಬ್ಯಾಗೆ ಕೋಲೆ 4
ಅರಹುವೆಂದ ಸೀರೆಯನುಟ್ಟು ಕುರವ್ಹೆಂಬ ಕುಪ್ಪಸಲಿ ಇರವಂತಿ ಪುಷ್ಪಲಿ ಮುಡಿದಿನ್ನು ಕೋಲೆ ಮುಡಿದು ಬರಲು ಪೂರ್ಣ ಒಡಗೂಡಿ ಬರುತಾನೆ ಬಡವನಾ ಧಾರಿ ಬಲಗೊಂಬೆ ಕೋಲೆ5
ಬಲಗೊಂಬೆ ಸಾಧನವು ನೆಲೆಗೊಂಡು ಮಾಡಬೇಕು ವಲವ್ಹಾಂಗ ತಾನೆ ಶ್ರೀಹರಿ ಕೋಲೆ ಶ್ರೀಹರಿ ಮುಂದೆ ನೀವು ಸೋಹ್ಯ ತಿಳಿದುಬನ್ನಿ ಸಾಹ್ಯಮಾಡುವ ಇಹಪರಕೆ ಕೋಲೆ 6
ದಾತ ಮಹಿಪತಿಸ್ವಾಮಿ ಸಹಕಾರನೊಬ್ಬ ಶ್ರೀಪತಿಕೋಲೆ ಶ್ರೀಪತಿಸ್ತುತಿ ಕೊಂಡಾಡಲಿಕ್ಕೆ ಪೂರ್ಣ ಭುಕ್ತಿ ಮುಕ್ತಿಯ ನೀಡು ತಾನೆ ಕೋಲೆ 7
***
No comments:
Post a Comment