ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳಿಕೊ ಗುರುಬುದ್ಧಿ ಮನವೆ ಕೇಳಿಕೊ ಗುರುಬುದ್ಧಿ ಕೇಳಿ ನಡೆಯದಿದ್ದರೆ ನೀನು ಜನ್ಮಕ ಜಾರಿಬಿದ್ದಿ ಮನವೆ ಪ
ವೇದಕ ನಿಲುಕದ ಹಾದಿಯದೋರುವ ಸದ್ಗರುವಿನ ಸುಬುದ್ಧಿ ಸಾಧಿಸಿ ನೋಡಲು ತನ್ನೊಳಗ ತಾ ಎದುರಿಡುವುದು ಸುಶುದ್ಧಿ ಭೆದಿಸದಲ್ಲದೆ ತಿಳಿಯದು ಎಂದಿಗೆ ಆದಿ ತತ್ವದ ನಿಜ ಶುದ್ಧಿ ಸುಬೋಧದಲಿ ಗೆದ್ದಿ 1
ತರಣೋಪಾಯಕೆ ಸಾಧನವೇ ಮುಖ್ಯ ಗುರುಬುದ್ಧಿಯ ವಿಶೇಷ ಪರಗತಿ ಸಾಧನ ಪಡೆದೇನಂದರೆ ಗುರು ಮಾತ ಉಪದೇಶ ದೋರುದು ತಾ ಹರುಷ ಭವ ಬಂಧಪಾಶ 2
ಗುರು ಘನಸೌಖ್ಯ ಸುರಮುನಿ ಜನರಿಗೆ ಬಲು ಅಗಮ್ಯದೋರುವದೆ ಆಠಕ್ಯ ತರಳ ಮಹಿಪತಿ ಮನವೆÀ ಕೇಳು ಗುರುರಾಯನ ಸುವಾಕ್ಯ ಪರ ಗೆಲಿಸುವದು ನಿಜಮುಖ್ಯ 3
***
No comments:
Post a Comment