ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರ ತಿಳಿಯದೆ ಭೇದಾಭೇದ ವಿದ್ಯಾತಕೆ ಸೂಸುವದ್ಯಾತಕೆ ಹರಿಭಕುತಿಗೆ ಪ
ಬಲಮುಣುಗುವದಿದ್ಯಾಕೆ ಬಲುವ ಭಾವದ ಕೀಲ ತಿಳಿಯದೆ ಮಾಲಿಜಪಕೈಯಲ್ಯಾತಕೆ ತಲೆ ಮುಸಕ್ಯಾತಕೆ ಹಲವು ಜನ್ಮ ಹೊಲಿಯು ತೊಳಿಯದೆ ಶೀಲಸ್ವಯಂಪಾಕ್ಯಾತಕೆ 1
ಹರಿಯ ಚರಣಾಂಬುಜನವರಿಯದೆ ಬರಿಯ ಮಾತಿನ್ಯಾತಕೆ ಗುರುವಿನಂಘ್ರಿಯ ಗುರುತವಿಲ್ಲದೆ ಶರಣಸಾವಿರವ್ಯಾತಕೆ ತುರಿಯಾವಸ್ಥೆಯೊಳರಿತು ಕೂಡದೆ ತೋರಿಕೆಯ ಡಂಭವ್ಯಾತಕೆ ತರಣೋಪಾಯದ ಸ್ಮರಣಿ ಇಲ್ಲದೆ ತರ್ಕಭೇದಗಳ್ಯಾತಕೆ 2
ಅಂತರಾತ್ಮದ ತಂತುವಿಡಿಯದೆ ಗ್ರಂಥಪಠಣಗಳ್ಯಾತಕೆ ಕಂತುಪಿತನಾರ್ಚನೆಯನರಿಯದೆ ತಂತ್ರ ಮಂತ್ರಗಳ್ಯಾತಕೆ ಪಂಥವರಿಯದೆ ಪರಮಯೋಗದಾನಂತ ವ್ರತವಿದುವ್ಯಾತಕೆ 3
ಸೋಹ್ಯವರಿಯದೆ ಶ್ರೀಹರಿಯ ನಿಜಬಾಹ್ಯರಂಜನೆವ್ಯಾತಕೆ ಗುಹ್ಯಮಹಾಮಹಿಮೆಯು ತಿಳಿಯದೆ ದೇಹ ಅಭಿಮಾನ್ಯಾತಕೆ ಸಾಹ್ಯವಿಲ್ಲದೆ ಶ್ರೀಹರಿಯ ದೇಹದಂಡದ್ಯಾತಕೆ ಮಹಾವಾಕ್ಯದಿತ್ಯರ್ಥವರಿಯದೆ ಸಾಯಸಬರುವದ್ಯಾತಕೆ 4
ಭಾಗ್ಯಭಕುತಿ ವೈರಾಗ್ಯವಿದು ನಿಜಯೋಗಾನಂದದ ಭೂಷಣ ಶ್ಲಾಘ್ಯವಿದು ತಾ ಇಹಪರದೊಳು ಸುಗಮ ಸುಪಥಸಾಧನ ಸಾರ ಯೋಗಿ ಮಾನಸಜೀವನ ಬಗೆಬಗೆಯಲನುಭವಿಸಿ ಮಹಿಪತಿಯೋಗ್ಯನಾಗೋ ಸನಾತನ 5
***
No comments:
Post a Comment